ಆಪ್ತರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ

Social Share

ಬೆಂಗಳೂರು,ಜ.10- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೋಲಾರವನ್ನು ತಮ್ಮ ಕ್ಷೇತ್ರವನ್ನು ಪಕ್ಕಾ ಮಾಡಿಕೊಂಡ ಬಳಿಕ, ತಮಗಾಗಿ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದ ಆಪ್ತರ ನೆರವಿಗೆ ಧಾವಿಸಲು ಮುಂದಾಗಿದ್ದಾರೆ.

ಪ್ರಸ್ತುತ ಶಾಸಕರಾಗಿರುವ ಬಾದಾಮಿಯಿಂದ ಸ್ಪರ್ಧೆ ಮಾಡಲು ಸಿದ್ದರಾಮಯ್ಯ ಹಿಂದೇಟು ಹಾಕುತ್ತಿದ್ದಂತೆ, ಅವರಿಗಾಗಿ ಹಲವಾರು ಮಂದಿ ಶಾಸಕರು ಮತ್ತು ಮಾಜಿ ಶಾಸಕರು ತಮ್ಮ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದರು. ಅವರಲ್ಲಿ ಪ್ರಮುಖವಾಗಿ ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್‍ಖಾನ್ ಕೂಡ ಒಬ್ಬರು.

ನಿನ್ನೆಯಷ್ಟೆ ಸಿದ್ದರಾಮಯ್ಯ ಕೋಲಾರದಿಂದ ಕಣಕ್ಕಿಳಿಯುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈಗ ತಮ್ಮ ಮೇಲೆ ಅಭಿಮಾನ ಇಟ್ಟವರ ನೆರವಿಗೆ ಧಾವಿಸುತ್ತಿದ್ದಾರೆ. ಇಂದು ಬಹುತೇಕ ದಿನ ಚಾಮರಾಜಪೇಟೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಕ್ಷೇತ್ರದಲ್ಲಿ ಪ್ರಭಾವಿ ನಾಯಕರ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಜೊತೆಗೆ ಜೆಡಿಎಸ್ ಪಕ್ಷದ 500ಕ್ಕೂ ಹೆಚ್ಚು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.

ಬಾಂಗ್ಲಾ ವಿಮಾನದಲ್ಲಿ ಬಟ್ಟೆ ಬಿಚ್ಚಿ ಬಡಿದಾಡಿಕೊಂಡ ಪ್ರಯಾಣಿಕರು

ಈ ಪ್ರವಾಸದಿಂದ ಜಮೀರ್ ಅಹಮದ್ ಖಾನ್‍ಗೆ ರಾಜಕೀಯವಾಗಿ ಲಾಭವಾಗುವುದು ಒಂದೆಡೆಯಾದರೆ, ಕೊನೆ ಕ್ಷಣದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಅದರಿಂದ ರಕ್ಷಣೆ ಪಡೆಯಲು ಸಿದ್ದರಾಮಯ್ಯ ಲೆಕ್ಕಚಾರ ಹಾಕಿದ್ದಾರೆ ಎನ್ನಲಾಗಿದೆ.

ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಆದರೆ ಅದು ಅಂದುಕೊಂಡಷ್ಟು ಸುಲಭವಾಗಿಲ್ಲ. ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸುಲಭಕ್ಕೆ ಹಿಂದಿನದಲ್ಲೆವನ್ನೂ ಮರೆತು ಸಿದ್ದರಾಮಯ್ಯ ಗೆಲುವಿಗೆ ಶ್ರಮಿಸುತ್ತಾರೆ ಎಂದು ಈಗಲೇ ಭಾವಿಸಲು ಸಾಧ್ಯವಿಲ್ಲ.

ಮೇಲಾಗಿ ಹೈಕಮಾಂಡ್ ಕೋಲಾರದಿಂದಲೇ ಸ್ಪರ್ಧೆಗೆ ಹಸಿರು ನಿಶಾನೆ ತೋರಿಸಲಿದೆಯೇ ಎಂಬುದೂ ಖಚಿತವಾಗಿಲ್ಲ. ಕೊನೆ ಕ್ಷಣದಲ್ಲಿ ಬದಲಾವಣೆಗಳಾದರೆ ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತಾಗಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಈಗಿನಿಂದಲೇ ಚಾಮರಾಜಪೇಟೆ ಕ್ಷೇತ್ರದ ನಾಯಕರ ಜೊತೆ ಸಂಪರ್ಕ ಇಟ್ಟುಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಅದರ ಹೊರತಾಗಿ ಕಳೆದ ಭಾರಿಯಂತೆ ಮುಂದಿನ ಚುನಾವಣೆಯಲ್ಲೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಸಿದ್ದರಾಮಯ್ಯ ಬೆಂಬಲಿಗರು ಒತ್ತಡ ಹಾಕುತ್ತಿದ್ದಾರೆ. ಅದಕ್ಕೆ ಹೈಕಮಾಂಡ್ ಸಮ್ಮತಿಸುವ ಸಾಧ್ಯತೆಗಳು ಕ್ಷೀಣವಾಗಿವೆ. ಒಂದು ವೇಳೆ ಕೊನೆ ಕ್ಷಣದಲ್ಲಿ ಅವಕಾಶ ಸಿಕ್ಕಿದ್ದೆ ಆದರೆ ಸಿದ್ದರಾಮಯ್ಯ ಅವರ ಆಯ್ಕೆ ಚಾಮರಾಜಪೇಟೆಯಾಗಿರಲಿದೆ ಎಂದು ಮೂಲಗಳು ತಿಳಿಸಿವೆ.

ಚಳಿಯಲ್ಲೂ ರಾಹುಲ್‍ ಟೀ ಶರ್ಟ್ ಧರಿಸೋದೇಕೆ..? ಇದರ ಹಿಂದಿದೆ ಮನಕಲಕುವ ಕಥೆ

ಈ ಎಲ್ಲಾ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಚಾಮರಾಜಪೇಟೆ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ತಮಗಾಗಿ ತ್ಯಾಗ ಮಾಡಲು ಮುಂದಾಗಿದ್ದ ಇನ್ನೂ ಇತರರ ನಾಯಕರ ಕ್ಷೇತ್ರಗಳಿಗೂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

Assembly election, siddaramaiah, Kolar, mla zameer, chamarajpet,

Articles You Might Like

Share This Article