ವಿಧಾನಸಭೆ ಚುನಾವಣೆ ಅಖಾಡಕ್ಕಿಳಿಯಲು ಮುಂದಾದ ಒಕ್ಕಲಿಗರ ಸಂಘದ ಪದಾಧಿಕಾರಿಗಳು

Social Share

ಬೆಂಗಳೂರು, ಮಾ.19- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಮುಂದಾಗಿದ್ದಾರೆ. ತಮಗಿಷ್ಟವಾದ ರಾಜಕೀಯ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದು, ಮೂರು ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ಸಂಘದ ಅಧ್ಯಕ್ಷರಾದ ಶಾಸಕ ಸಿ.ಎನ್.ಬಾಲಕೃಷ್ಣ ಅವರು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಜೆಡಿಎಸ್‍ನಿಂದ ಸ್ಪರ್ಧೆಗಿಳಿಯಲಿದ್ದಾರೆ.

ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮತ್ತು ಸಂಘದ ಖಜಾಂಚಿ ಆರ್. ಪ್ರಕಾಶ್ ಅವರು ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದಾರೆ. ಜೆಡಿಎಸ್ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಪ್ರಕಾಶ್ ಗೋವಿಂದರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.

ಶಿವಮೊಗ್ಗ: ಡಿಸಿ ಕಚೇರಿ ಮೇಲೆ ಆಜಾನ್ ಕೂಗಿ ಯುವಕನ ಉದ್ಧಟತನ

ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಯಾಗಿರುವ ಟಿ. ಕೋನಪ್ಪರೆಡ್ಡಿ ಅವರು ಸಹ ವಿಧಾನಸಭೆ ಚುನಾವಣೆಗೆ ಸ್ರ್ಪಸಲು ಸಜ್ಜಾಗುತ್ತಿದ್ದಾರೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸಲಿದ್ದು, ಆಡಳಿತಾರೂಢ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಅದೇ ರೀತಿ ಸಂಘದ ನಿರ್ದೇಶಕರಾದ ಡಾ. ಟಿ.ಹೆಚ್.ಆಂಜನಪ್ಪ ಹಾಗೂ ಎಂ.ಎಸ್.ಉಮಾಪತಿ ಅವರು ಕೂಡ ಚುನಾವಣೆಯಲ್ಲಿ ಸ್ರ್ಪಧಿಸಲು ಉತ್ಸುಕರಾಗಿದ್ದಾರೆ. ಆಂಜನಪ್ಪ ಅವರು ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.

ರಾಷ್ಟ್ರೀಯ ಆರೋಗ್ಯ ಮಿಷನ್ ನೌಕರರ ವಿರುದ್ಧ ಎಸ್ಮಾ ಜಾರಿ

ನಿರ್ಮಾಪಕರಾದ ಎಂ.ಎಸ್.ಉಮಾಪತಿ ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಈಗಾಗಲೇ ಸ್ಪರ್ಧೆಗೆ ತಯಾರಿ ನಡೆಸಿದ್ದಾರೆ. ಈ ಹಿಂದೆಯೂ ಸಂಘದ ನಿರ್ದೇಶಕರಾಗಿದ್ದ ಕೆಲವರು ಶಾಸಕರಾಗಿದ್ದರು.

Articles You Might Like

Share This Article