Monday, May 6, 2024
Homeರಾಜ್ಯವಿಧಾನಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆ ಓದುವ ಹೊಸ ಸಂಪ್ರದಾಯ ಪ್ರಾರಂಭ

ವಿಧಾನಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆ ಓದುವ ಹೊಸ ಸಂಪ್ರದಾಯ ಪ್ರಾರಂಭ

ಬೆಳಗಾವಿ,ಡಿ.4- ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಹೊಸ ಸಂಪ್ರದಾಯವನ್ನು ಆರಂಭಿಸಲಾಯಿತು. ಬೆಳಿಗ್ಗೆ ವಂದೇ ಮಾತರಂನೊಂದಿಗೆ ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೂಲಪ್ರತಿಯನ್ನು ಓದಲಾಗುತ್ತದೆಯೋ ಅಥವಾ ತಿದ್ದುಪಡಿ ಮಾಡಲಾದ ಮಾಹಿತಿಯನ್ನೋ ಎಂದು ಪ್ರಶ್ನೆ ಮಾಡಿದರು. ತಮಗೆ ಪ್ರಸ್ತಾವನೆಯ ಪ್ರತಿಯೇ ತಲುಪಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ

ನಾನು ಓದುತ್ತೇನೆ, ನೀವು ಅದರಂತೆ ಹೇಳಿ ಎಂದು ಸಮಜಾಯಿಷಿ ನೀಡಿದ ಸಭಾಧ್ಯಕ್ಷರು ಬಸನಗೌಡ ಪಾಟೀಲ್ ಯತ್ನಾಳ್‍ರಿಗೆ ಪ್ರತಿಯನ್ನು ತಲುಪಿಸಲು ಸೂಚಿಸಿದರು. ನಂತರ ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಅದರ ಸಮಸ್ತ ನಾಗರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ ಅಭಿವ್ಯಕ್ತಿ ವಿಶ್ವಾಸ ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃ ಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ ನಮ್ಮ ಸಂವಿಧಾನದ ಸಭೆಯಲ್ಲಿ 1949 ನೆಯ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿ ಅನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದು ಹೇಳಿದರು. ಎಲ್ಲಾ ಸಚಿವರು ಮತ್ತು ಪಕ್ಷಾತೀತವಾಗಿ ಶಾಸಕರು ಎದ್ದುನಿಂತು ಸಂವಿಧಾನದ ಪೀಠಿಕೆಯನ್ನು ಓದಿದರು.

RELATED ARTICLES

Latest News