ಕರ್ನಾಟಕದ 70 ಜಾತಿ-ಉಪಜಾತಿಗಳ ಸೇರ್ಪಡೆ ಬೇಡಿಕೆಗೆ ಸ್ಪಂದನೆ

Social Share

ಬೆಂಗಳೂರು,ಫೆ.15- ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ- ಉಪಜಾತಿಗಳ ಸೇರ್ಪಡೆ ಮಾಡಬೇಕೆಂಬ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮನವಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಧನಾತ್ಮಕವಾಗಿ ಸ್ಪಂದಿಸಿದ್ದಾರೆ.
ಕೇಂದ್ರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ರಾಜ್ಯದ ಹಿಂದುಳಿದ ಜಾತಿ-ಉಪ ಜಾತಿಗಳ ಸೇರ್ಪಡೆಗೆ ಈಗಾಗಲೇ ಕೇಂದ್ರದ ಹಿಂದುಳಿದ ಆಯೋಗಕ್ಕೆ ಪತ್ರ ಬರೆಯಲಾಗಿದೆ. ನಿಮ್ಮ ಮನವಿಯ ಮೇರೆಗೆ ಮತ್ತೊಮ್ಮೆ ಕೇಂದ್ರದ ಹಿಂದುಳಿದ ಆಯೋಗಕ್ಕೆ ಪತ್ರ ಬರೆದು ಗಮನ ಸೆಳೆಯುತ್ತೇನೆ ಎಂದು ಭರವಸೆ ನೀಡಿದರು.
ಜೊತೆಗೆ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ-2ಎಗೆ ಸೇರ್ಪಡೆ ವಿಚಾರವಾಗಿ ಮಾತನಾಡಿ, ಪ್ರವರ್ಗ 2 ಎಗೆ ಪಂಚಮಸಾಲಿ ಸೇರಿಸುವ ವರದಿ ತಿರಸ್ಕಾರವಾಗಿದೆ. ಇದರ ಬಗ್ಗೆ ನಾನು ನಿಷ್ಪಕ್ಷವಾದಂತಹ ವರದಿಯನ್ನು ನೀಡುತ್ತೇನೆ ತಿಳಿಸಿದರು.
ಇದಕ್ಕೂ ಮುನ್ನ ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಅಲಕ್ಷಿತ-ಅರ್ಹ ಹಿಂದುಳಿದ 70 ಜÁತಿ- ಉಪಜÁತಿಗಳನ್ನು ಸೇರಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರಾದ ಜಯ ಪ್ರಕಾಶ್ ಹೆಗ್ಡೆ ಅವರಿಗೆ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಮನವಿ ಸಲ್ಲಿಕೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಎಂ.ಸಿ.ವೇಣುಗೋಪಾಲ್ ಅವರು, 1992ರ ಮಂಡಲ್ ಆಯೋಗದ ವರದಿಯಂತೆ ಕರ್ನಾಟಕದ 323 ಜಾತಿ-ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆನಂತರದಲ್ಲಿ 283 ಜಾತಿ-ಉಪಜಾತಿಗಳನ್ನು ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಆದರೂ ಸುಮಾರು 70 ಜಾತಿ ಉಪಜಾತಿಗಳು ರಾಜ್ಯ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದರೂ, ಕೇಂದ್ರದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ.
ಇವುಗಳೆಲ್ಲವೂ ಅತಿ ಹೆಚ್ಚು ಹಿಂದುಳಿದ ವರ್ಗಗಳಿಗೂ ಪರಿಗಣಿಸಲ್ಪಟ್ಟಿವೆ. ಈ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗಲು, ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇವುಗಳನ್ನು ಸೇರಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ-2ಎಗೆ ಸೇರ್ಪಡೆಗೊಳಿಸಲು ವಿರೋಧ ವ್ಯಕ್ತಪಡಿಸಿದರು. ಪಂಚಮಸಾಲಿ ಸಮುದಾಯವು ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವುದರಿಂದ ಅಂತಹ ಉಪಜಾತಿಯನ್ನು ಮುಖ್ಯಜಾತಿಯಿಂದ ಬೇರ್ಪಡಿಸಿ ಬೇರೊಂದು ಪ್ರವರ್ಗಕ್ಕೆ ವರ್ಗಾಯಿಸುವುದು ಸರ್ವೋಚ್ಛ ನ್ಯಾಯಲಯ ಇಂದ್ರಾ ಸಹಾನಿ ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ವಿರುದ್ಧವಾಗಿರುತ್ತದೆ. ಆದ್ದರಿಂದ ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವುದನ್ನು ವೇದಿಕೆ ವಿರೋಸುತ್ತದೆ ಎಂದು ಸ್ಪಷ್ಟಪಡಿಸಿದರು.
ಹಾಗೊಂದು ವೇಳೆ ನ್ಯಾಯಸಮ್ಮತವಲ್ಲದ ವಿಧಾನದಿಂದ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ವರ್ಗಾಯಿಸಿದಲ್ಲಿ ಅಸಮಬಲರ ನಡುವೆ ಸ್ಪರ್ಧೆ ಉಂಟಾಗಿ ಪ್ರವರ್ಗ-2ಎಯಲ್ಲಿರುವ ಜಾತಿ-ಉಪಜಾತಿಗಳು ಅದರೊಡನೆ ಸೆಣಸಲಾಗದೆ ಘೋರ ಅನ್ಯಾಯಕ್ಕೆ ಒಳಗಾಗುತ್ತವೆ . ನ್ಯಾ. ಸುಭಾಷ್ ಆದಿ ಸಮಿತಿಯಿಂದ ಪಂಚಮಸಾಲಿ ವಿಷಯ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಇದಲ್ಲದೆ ಸ್ಥಳೀಯ ಸಂಸ್ಥೆಗಳ ಮೀಸಲಾತಿಯಂತೆಯೇ ಶಾಸನಸಭೆ ಮತ್ತು ಸಂಸತ್ತಿನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಬೇಕು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿರುವ ಸಮಾಜೋ-ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಕೂಡಲೇ ಸ್ವೀಕರಿಸಿ ಬಹಿರಂಗ ಪಡಿಸಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ ರವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ ರವರು, ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜು, ಖಜÁಂಚಿ ಎಲ್.ಎ ಮಂಜುನಾಥ್ ಸೇರಿದಂತೆ ಪದಾಕಾರಿಗಳು ಉಪಸ್ಥಿತರಿದ್ದರು.

Articles You Might Like

Share This Article