ಬೆಂಗಳೂರು, ಜು.31-ಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ವಿಧಾನಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲು ಆರು ಮಂದಿ ಹಿರಿಯ ಶಾಸಕರನ್ನು ನಾಮ ನಿರ್ದೇಶನ ಮಾಡಲಾಗಿದೆ.ಅಪ್ಪಾಜಿ ನಾಡಗೌಡ, ತನ್ನೀರ್ ಸೇಠ್, ಬಿ. ಆರ್. ಪಾಟೀಲ್, ಅಬ್ಬಯ್ಯ ಪ್ರಸಾದ್, ಆರಗ ಜ್ಞಾನೇಂದ್ರ, ಎಂ. ಟಿ. ಕೃಷ್ಣಪ್ಪ ಅವರು ಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ವಿಧಾನಸಭೆಯ ಅಧ್ಯಕ್ಷತೆ ವಹಿಸಲಿರುವ ಸದಸ್ಯರೆಂದು ಸಭಾಧ್ಯಕ್ಷ ಯು.ಟಿ.ಖಾದರ್ ನಾಮ ನಿರ್ದೇಶನ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 9ರ ಮೇರೆಗೆ ಸಭಾಧ್ಯಕ್ಷರು 6 ಮಂದಿ ವಿಧಾನಸಭಾ ಸದಸ್ಯರನ್ನು ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಲಭ್ಯವಾಗಿರುವ ಅಸ್ಥಿಪಂಜರಗಳ ರಹಸ್ಯ ಬೇಧಿಸಲು ಮುಂದಾದ ಎಸ್ಐಟಿ
- ಹೂವಿನಲ್ಲಿ ಅರಳಲಿದ್ದಾರೆ ಕಿತ್ತೂರು ರಾಣಿ ಚೆನ್ನಮ ಮತ್ತು ಸಂಗೊಳ್ಳಿ ರಾಯಣ್ಣ
- ರಾಹುಲ್ ಗಾಂಧಿ ಆರೋಪಗಳು ಆಧಾರ ರಹಿತ : ಚುನಾವಣಾ ಆಯೋಗ
- ಸ್ಮೋಕಿಂಗ್ ಜೋನ್ ಇಲ್ಲದ ಬಾರ್ಗಳಿಗೆ ನೋಟೀಸ್
- ಮುಂದುವರೆದ ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ, ಸಂಧಾನಕ್ಕೆ ‘ಕೈ’ಕಮಾಂಡ್ ಸರ್ಕಸ್