Saturday, May 4, 2024
Homeರಾಜಕೀಯಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಸಜ್ಜಾದ ಬಿಜೆಪಿ-ಜೆಡಿಎಸ್

ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಸಜ್ಜಾದ ಬಿಜೆಪಿ-ಜೆಡಿಎಸ್

ಬೆಂಗಳೂರು, ಡಿ.4- ಕುಂದಾನಗರಿ ಬೆಳಗಾವಿಯಲ್ಲಿ ಇಂದಿನಿಂದ ಆರಂಭವಾದ ಚಳಿ ಗಾಲದ ಅಧಿವೇಶನದಲ್ಲಿ ಆಡಳಿತಾ ರೂಢ ಕಾಂಗ್ರೆಸ್ ಪಕ್ಷವನ್ನು ಹಣಿಯಲು ಪ್ರತಿಪಕ್ಷ ಗಳಾದ ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಯಾಗಿ ಅಖಾಡಕ್ಕೆ ಧುಮುಕಲು ಸಿದ್ಧವಾಗಿದ್ದು, ಪರಸ್ಪರ ಸಹಕಾರ ದಿಂದ ಒಟ್ಟಾಗಿ ಕಾಂಗ್ರೆಸ್ ಎದುರಿಸಲು ಸನ್ನದ್ಧವಾಗಿವೆ.

ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪ್ರತಿಪಕ್ಷಗಳು ಜಂಟಿಯಾಗಿ ವಾಗ್ದಾಳಿ ನಡೆಸಲಿವೆ.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಾಗುತ್ತಿಲ್ಲ. ಗೃಹ ಒಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಮಹಿಳೆಯರ ಖಾತೆಗೆ ಪಾವತಿಯಾಗುತ್ತಿಲ್ಲ. ಯುವನಿ ಇನ್ನೂ ಜಾರಿಯೇ ಆಗಿಲ್ಲ. ಗೃಹ ಜ್ಯೋತಿಯಡಿ 200 ಯೂನಿಟ್ ಎಂದು ಹೇಳಿ ಷರತ್ತು ಹಾಕಿ ಕಡಿತ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಕಲ್ಪಿಸಿದ್ದರೂ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡದ ಕುರಿತು ಸದನದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲು ಉಭಯ ಪಕ್ಷಗಳು ಮುಂದಾಗಿವೆ.

ಇನ್ನು ಬರ ನಿರ್ವಹಣೆಯಲ್ಲಿ ವಿಫಲವಾಗಿರುವುದರ ಕುರಿತು ಸರ್ಕಾರಕ್ಕೆ ಚಾಟಿ ಬೀಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಕೇಂದ್ರದ ಕಡೆ ಬೆರಳು ಮಾಡುತ್ತಿರುವ ರಾಜ್ಯ ಸರ್ಕಾರ, ರಾಜ್ಯದಿಂದ ನೀಡಬೇಕಾದ ಪರಿಹಾರವನ್ನು ನೀಡುತ್ತಿಲ್ಲ ಎಂಬ ವಿಷಯವನ್ನು ಮುಂದಿಟ್ಟುಕೊಂಡು ಸದನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಯಾಗಿ ಹೋರಾಟ ನಡೆಸಲಿವೆ.

ವಿಧಾನಮಂಡಲದ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ

ಇದರ ಜೊತೆ ಬಹುಮುಖ್ಯ ವಾಗಿ ಕಮೀಷನ್ ವಿಷಯ ಸದನದಲ್ಲಿ ಈ ಬಾರಿ ಹೆಚ್ಚು ಸದ್ದು ಮಾಡಲಿದೆ. ಬಿಜೆಪಿ ಸರ್ಕಾರದ ವೇಳೆ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧವೇ ಈಗ ಕಮೀಷನ್ ಆರೋಪ ಬಂದಿದೆ. ಗುತ್ತಿಗೆದಾರರ ಸಂಘವೇ ಈ ಬಗ್ಗೆ ಬಹಿರಂಗವಾಗಿ ಆರೋಪ ಮಾಡಿದೆ. ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಈ ಎಲ್ಲಾ ವಿಷಯಗಳನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಸದನದಲ್ಲಿ ಹರಿಹಾಯಲಿವೆ.

ಅನುದಾನದ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಅಸಮಾಧಾನ ಗೊಂಡಿರುವ ಕುರಿತು ಬಿಜೆಪಿ ಹಾಗು ಜೆಡಿಎಸ್ ಸದನದಲ್ಲಿ ಪ್ರಸ್ತಾಪ ಮಾಡಲಿವೆ. ಬಿ.ಆರ್ ಪಾಟೀಲ್ ಪತ್ರ, ಮುನಿರತ್ನ ಕ್ಷೇತ್ರದ ಅನುದಾನ ವಾಪಸ್, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗದೇ ಇರುವ ವಿಷಯಗಳನ್ನು ಪ್ರಸ್ತಾಪ ಮಾಡಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗು ಜೆಡಿಎಸ್ ಎರಡೂ ಪಕ್ಷಗಳು ಸಿದ್ಧತೆ ನಡೆಸಿವೆ.

ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಬಿಜೆಪಿ ಶಾಸಕರು ಕೈ ಮುಗಿದು ಗೌರವ ಕೊಡುವಂತೆ ಮಾಡಿದ್ದೇವೆ ಎಂದು ವಸತಿ ಸಚಿವ ಜಮೀರ್ ಅಹಮದ್ ನೀಡಿದ್ದ ಹೇಳಿಕೆ ಕುರಿತು ಸದನದಲ್ಲಿ ಪ್ರಸ್ತಾಪಿಸಿ ಕ್ಷಮೆಯಾಚನೆಗೆ ಪಟ್ಟುಹಿಡಿಯುವ ಅಥವಾ ಹಕ್ಕುಚ್ಯುತಿ ಮಂಡಿಸುವ ಕುರಿತು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮತ್ತೊಮ್ಮೆ ಚಿಂತನೆ ನಡೆಸಿ ನಿರ್ಧಾರಕ್ಕೆ ಬರಲಿದ್ದಾರೆ.

ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ

ಅಕ್ರಮ ಆಸ್ತಿಗಳಿಗೆ ಆರೋಪ ಕುರಿತು ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ವಿರುದ್ಧದ ಪ್ರಕರಣ ವನ್ನು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ವಾಪಸ್ ಪಡೆದ ನಿರ್ಧಾರದ ವಿರುದ್ಧವೂ ಉಭಯ ಪ್ರತಿಪಕ್ಷಗಳು ಜಂಟಿ ಯಾಗಿ ಹೋರಾಟ ನಡೆಸಲು ಉದ್ದೇಶಿಸಿವೆ.

RELATED ARTICLES

Latest News