Monday, November 4, 2024
Homeರಾಜ್ಯಬರಗಾಲದ ಚರ್ಚೆಗೆ ಪ್ರತಿಪಕ್ಷಗಳಿಂದ ನಿಲುವಳಿ ಸೂಚನೆಯಡಿ ನೋಟಿಸ್

ಬರಗಾಲದ ಚರ್ಚೆಗೆ ಪ್ರತಿಪಕ್ಷಗಳಿಂದ ನಿಲುವಳಿ ಸೂಚನೆಯಡಿ ನೋಟಿಸ್

ಬೆಳಗಾವಿ,ಡಿ.4- ಚಳಿಗಾಲ ಅಧಿವೇಶನದ ಮೊದಲ ದಿನವೇ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಲು ಅವಕಾಶ ಕೋರಿ ಪ್ರತಿಪಕ್ಷಗಳು ನಿಲುವಳಿ ಸೂಚನೆಯಡಿ ನೋಟಿಸ್ ನೀಡಿವೆ. ಇಂದು ಬೆಳಗ್ಗೆ ವಿಧಾನಸಭೆ ಕಾರ್ಯದರ್ಶಿ ಯವರಿಗೆ ನಿಲುವಳಿ ಸೂಚನೆ ನೋಟಿಸ್ ನೀಡಲಾಗಿದ್ದು, ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಕೋರಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನೋಟಿಸ್ ನೀಡಿದ್ದಾರೆ.

ರಾಜ್ಯಾದ್ಯಂತ ತೀವ್ರ ಸ್ವರೂಪದ ಬರಗಾಲ ಆವರಿಸಿದೆ. ಕೃಷಿ, ತೋಟಗಾರಿಕೆ ಬೆಳೆಗಳು ಮಳೆ ಅಭಾವದಿಂದ ಹಾನಿಗೀಡಾ ಗಿವೆ. ಸುಮಾರು 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, ಅತಂಕಕ್ಕೊಳಗಾಗಿರುವ ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂದು ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ.

ಅಧಿವೇಶನಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ

ತೀವ್ರ ಸ್ವರೂಪದ ಬರ ಪರಿಸ್ಥಿತಿ ಇದ್ದರೂ ರಾಜ್ಯದಲ್ಲಿ ಸಮಪರ್ಕವಾಗಿ ಬರ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ಕೃಷಿ, ಕೂಲಿ ಕಾರ್ಮಿಕರು ಉದ್ಯೋಗ ಹುಡುಕಿಕೊಂಡು ಬೇರೆ ರಾಜ್ಯಗಳತ್ತ ಗೂಳೇ ಹೋಗುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದೆ.

ಇತ್ತೀಚೆಗಷ್ಟೇ ರೈತರಿಗೆ 2000 ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಬರಪರಿಹಾರ ಕಾಮಗಾರಿಗಳು ನಡೆಯುತ್ತಿಲ್ಲ. ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಮೇವು ಬ್ಯಾಂಕ್ ಸ್ಥಾಪನೆ, ಗೋಶಾಲೆ ತೆರೆಯಲು ಅಗತ್ಯ ಕ್ರಮ ಕೈಗೊಂಡಿಲ್ಲ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ, ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಲು ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳ ಶಾಸಕರು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ನೋಟಿಸ್‍ನಲ್ಲಿ ಕೋರಿದ್ದಾರೆ.

RELATED ARTICLES

Latest News