ನಾಶಿಕ್, ಆ.11- ಉಕ್ಕು, ಜವಳಿ ವ್ಯಾಪಾರಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ 58 ಕೋಟಿ ರೂಪಾಯಿ ನಗದು ಸೇರಿದಂತೆ 390 ಕೋಟಿ ರೂಪಾಯಿಗಳ ಅಕ್ರಮ ಸಂಪತ್ತನ್ನು ವಶ ಪಡಿಸಿಕೊಂಡಿದೆ.
ಮಹಾರಾಷ್ಟ್ರದ ನಾಸಿಕ್ ಘಟಕ ಆಗಸ್ಟ್ ಮೊದಲ ವಾರದಲ್ಲಿ ಜಲನ್ ಮತ್ತು ಔರಂಗಬಾದ್ ನಗರಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆ ಮೂಲಗಳ ಪ್ರಕಾರ 390 ಕೋಟಿ ರೂಪಾಯಿ ಸಂಪತ್ತನ್ನು ಪತ್ತೆ ಹಚ್ಚಲಾಗಿದೆ. ಅದರಲ್ಲಿ 32ಕೆ.ಜಿ. ಚಿನ್ನವನ್ನು ಜಪ್ತಿ ಮಾಡಲಾಗಿದೆ.
ಆದಾಯ ತೆರಿಗೆ ಇಲಾಖೆಯ 260ಕ್ಕೂ ಹೆಚ್ಚು ಅಧಿಕಾರಿಗಳು, ಐದು ತಂಡಗಳಾಗಿ, ಸುಮಾರು 13 ಗಂಟೆ ಕಾಲ ಶೋಧ ಕಾರ್ಯಾಚರಣೆ ನಡೆಸಿದ್ದರು.