ಮುಂಬೈ, ಮೇ 14-ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಭಾರಿ ದೂಳಿನ ಗಾಳಿಯಿಂದ ಜಾಹಿತಾತು ಫಲಕ (ಹೋರ್ಡಿಂಗ್)ಕುಸಿದು ಸಂಭವಿಸಿದ ದುರ್ಘಟನೆಯಲ್ಲಿ ಸಾವಿನ ಸಂಖ್ಯೆ 14 ಕ್ಕೆ ಏರಿದೆ ಮತ್ತು 74 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನಲ್ಲಿ ನಿನ್ನೆ ರಾತ್ರಿ ಧೂಳಿನ ಬಿರುಗಾಳಿ ಮತ್ತು ಅಕಾಲಿಕ ಮಳೆಯ ಸಂದರ್ಭದಲ್ಲಿ ಘಾಟ್‌ಕೋಪರ್‌ನ ಪೆಟ್ರೋಲ್ ಪಂಪ್‌ನಲ್ಲಿ 100 ಅಡಿ ಎತ್ತರದ ಅಕ್ರಮ ಅಳವಡಿಸಿದ್ದ ಜಾಹೀರಾತು ಫಲಕ ನೆಲಕ್ಕೆ ಉರುಳಿ ಬಿದ್ದಿದೆ.
ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಗಳು ಇಂದು ಬೆಳಗ್ಗೆ ಛೇಡಾ ನಗರದ ಘಟನಾ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಸುತ್ತಿದ್ದಾರೆ.ಸಾವಿನ ಸಂಖ್ಯೆ 14 ಕ್ಕೆ ಏರಿದೆ, ಗಾಯಗೊಂಡವರ ಸಂಖ್ಯೆ 74 ಮುಟ್ಟಿದ್ದು ಇದರಲ್ಲಿ 31 ಜನರನ್ನು ರಾಜವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ ಮತ್ತು 35 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಕಾರು ಸೇರಿದಂತೆ ಹಲವಾರು ವಾಹನಗಳು ಜಖಂಗೊಂಡಿದೆ .ಭಾರಿ ಲ ಮೇಲೆತ್ತಲು ಪ್ರಯತ್ನಿಸಲಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನೂ ಎಂಟು ಗಾಯಾಳುಗಳು ಮೂರು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.ಇದರ ನಡುವೆ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಮುಂಬೈಪೊಲೀಸ್ ತಂಡವು ರಕ್ಷಣಾ ಕಾರ್ಯಾಚರಣೆಯಲ್ಲಿದೆ. ನಾವು ನಾಗರಿಕರಿಗೆ ಕಠಿಣ ಕಾನೂನು ಕ್ರಮದ ಭರವಸೆ ನೀಡುತ್ತೇವೆ ಎಂದರು.
ಬಂಕ್ ಮಾಲೀಕ ಭವೇಶ್ ಭಿಂಡೆ ಮತ್ತು ಇತರರ ವಿರುದ್ಧ ಪಂತ್ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಸೇರಿದಮತೆ ಇತರ ಕಾಯ್ಧೆ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ ಜಾಹೀರಾತು ಫಲಕ ಅಕ್ರಮವಾಗಿದ್ದು, ಅದನ್ನು ಅಳವಡಿಸಲು ಯಾವುದೇ ಅನುಮತಿ ಪಡೆದಿಲ್ಲ ಎಂದು ಪೌರ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ನಗರದ ಎಲ್ಲಾ ಹೋರ್ಡಿಂಗ್‌ಗಳ ತಪಾಸಣೆ ನಡೆಸಲುಆದೇಶಿಸಿದರು. ಅಕ್ರಮ ಮತ್ತು ಅಪಾಯಕಾರಿ ಎಂದು ಕಂಡುಬಂದಲ್ಲಿ ಹೋರ್ಡಿಂಗ್‌ಗಳನ್ನು ತಕ್ಷಣವೇ ತೆಗೆದುಹಾಕಲಾಗುವುದು ಎಂದು ಅವರು ಹೇಳಿದರು. ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೆರವು ಘೋಷಿಸಿದರು