ಬೆಂಗಳೂರು, ಆ.7- ಧರ್ಮಸ್ಥಳದಲ್ಲಿ ಪತ್ರಕರ್ತರು ಹಾಗೂ ಯೂಟ್ಯೂಬರ್‌ಗಳ ಮೇಲೆ ಹಲ್ಲೆಯಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಲಾಲ್‌ಬಾಗ್‌ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ದೆಹಲಿಯಲ್ಲಿ ಇಂಡಿಯಾ ರಾಜಕೀಯ ಮೈತ್ರಿಕೂಟದ ನಾಯಕರಿಗೆ ಔತಣಕೂಟ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸಲು ನಾನು ದೆಹಲಿಗೆ ತೆರಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರ ಮತಗಳ್ಳತನದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು.