ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣ ಸಿಐಡಿ ತನಿಖೆಗೆ

Social Share

ಬೆಂಗಳೂರು,ಅ.18- ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದರು. ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದ ಬಳಿಕ ಕಡತಗಳನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ.

ಕಾರು ಚಾಲಕ ನೀಡಿದ್ದ ದೂರಿನ ಅನ್ವಯ ಪಳ್ನೀರ್ ನಿವಾಸಿ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆತನ ಮನೆ ಮೇಲೆ ಶೋಧ ನಡೆಸಿ ಎರಡು ಮೊಬೈಲ್, ರಾಡ್ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗೆ ಈಗಾಗಲೇ ಜಾಮೀನು ನೀಡಿರುವುದರಿಂದ ಪ್ರಕರಣದ ಕುರಿತು ಸುದೀರ್ಘ ತನಿಖೆ ನಡೆಸಬೇಕೆಂದು ಕೆಲವರು ಒತ್ತಾಯಿಸಿದ್ದರಿಂದ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದೆ.

Articles You Might Like

Share This Article