Monday, March 31, 2025
Homeಬೆಂಗಳೂರುಸಾಫ್ಟ್‌ವೇರ್ ಎಂಜಿನಿಯರ್‌ಗೆ ಪೆಪ್ಪರ್‌ ಸ್ಪ್ರೇ ಮಾಡಿ ದರೋಡೆಗೆ ಯತ್ನ

ಸಾಫ್ಟ್‌ವೇರ್ ಎಂಜಿನಿಯರ್‌ಗೆ ಪೆಪ್ಪರ್‌ ಸ್ಪ್ರೇ ಮಾಡಿ ದರೋಡೆಗೆ ಯತ್ನ

Attempted-Robbery-with-pepper-spray-on-software-engineer

ಬೆಂಗಳೂರು, ಅ.19- ಮೆಟ್ರೋ ಇಳಿದು ಸ್ನೇಹಿತನ ಜೊತೆ ಸಾಫ್ಟ್‌ವೇರ್ ಎಂಜಿನಿಯರ್‌ ಮಾತನಾಡುತ್ತಾ ಹೋಗುತ್ತಿದ್ದಾಗ ಒಂದೇ ಬೈಕ್‌ನಲ್ಲಿ ಬಂದ ಮೂವರು ದರೋಡೆಕೋರರು ಇವರಿಗೆ ಪೆಪ್ಪರ್‌ ಸ್ಪ್ರೇ ಮಾಡಿ ಮೊಬೈಲ್‌ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಘಟನೆ ಹೊಸಹಳ್ಳಿ ಮೆಟ್ರೋ ನಿಲ್ದಾಣ ಸಮೀಪ ರಾತ್ರಿ ನಡೆದಿದೆ.

ಸಾಫ್‌್ಟವೇರ್‌ ಎಂಜಿನಿಯರ್‌ ಅಭಿಜಿತ್‌ ಅವರು ರಾತ್ರಿ 10.45ರ ಸುಮಾರಿನಲ್ಲಿ ಮೆಟ್ರೋ ನಿಲ್ದಾಣದಲ್ಲಿ ಇಳಿದು ಸ್ನೇಹಿತನೊಂದಿಗೆ ಮಾತನಾಡುತ್ತಾ ಹೋಗುತ್ತಿದ್ದರು.ಮಾರ್ಗಮಧ್ಯೆ ಒಂದೇ ಬೈಕ್‌ನಲ್ಲಿ ಬಂದ ಮೂವರು ದರೋಡೆಕೋರರು ಅಭಿಜಿತ್‌ ಜತೆ ಜಗಳವಾಡಿ ಹಲ್ಲೆ ನಡೆಸಿ ಪೆಪ್ಪರ್‌ ಸ್ಪ್ರೇ ಮಾಡಿ ಮೊಬೈಲ್‌ ದರೋಡೆಗೆ ಯತ್ನಿಸಿದಾಗ ಸಹಾಯಕ್ಕಾಗಿ ಕೂಗಿಕೊಳ್ಳುತ್ತಿದ್ದಂತೆ ದರೋಡೆಕೋರರು ಪರಾರಿಯಾಗಿದ್ದಾರೆ.

ಈ ಬಗ್ಗೆ ಅಭಿಜಿತ್‌ ಅವರು ಗೋವಿಂದರಾಜ ನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ದರೋಡೆಕೋರರ ಪತ್ತೆಗೆ ಬಲೆಬೀಸಿದ್ದಾರೆ.

RELATED ARTICLES

Latest News