ಪ್ರೇಯಸಿಗೆ ಇರಿದು ಆತ್ಮಹತ್ಯೆ ಯತ್ನಿಸಿದ ಪಾಗಲ್ ಪ್ರೇಮಿ

ಬೆಂಗಳೂರು, ನ.11- ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಗೆ ಚಾಕುವಿನಿಂದ ಇರಿದು ನಂತರ ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಟಾಲ್ಡ್ರಾನ್ ಟೆನ್ವಿ ಇರಿತಕ್ಕೊಳಗಾದ ಪ್ರೇಯಸಿ ಹಾಗೂ ಆತ್ಮಹತ್ಯೆಗೆ ಯತ್ನಿಸಿದ ಅಂತ್ರಾಜ್ ಜೈಸ್ವಾಲ್‍ನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇವರಿಬ್ಬರು ಪ್ರೀತಿಸುತ್ತಿದ್ದು, ಯಾವುದೋ ವಿಚಾರವಾಗಿ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ಜಗಳವಾಡಿಕೊಂಡಿದ್ದಾರೆ.

ಇಷ್ಟಕ್ಕೇ ಸುಮ್ಮನಾಗದೆ ಜೈಸ್ವಾಲ್ ಕೋಪಗೊಂಡು ಚಾಕುವಿನಿಂದ ಪ್ರೇಯಸಿಗೆ ಇರಿದು ನಂತರ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಾಗರಬಾವಿಯ ವಿದ್ಯಾಗಿರಿ ಲೇಔಟ್ ಬಳಿ ಈ ಘಟನೆ ನಡೆದಿದ್ದು,

ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ  ಇವರಿಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಚಂದ್ರಾ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.