ಬೆಂಗಳೂರು, ಫೆ.8- ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದ ಆಟೋ ಚಾಲಕರೊಬ್ಬರನ್ನು ಹಿಂಬಾಲಿಸಿಕೊಂಡು ಹೋದ ದುಷ್ಕರ್ಮಿಗಳು ದೊಣ್ಣೆಯಿಂದ ಹೊಡೆದು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.
ಚಿಕ್ಕಬಾಣಸವಾಡಿಯ ನಿವಾಸಿ ಶೇಖರ್(29) ಕೊಲೆಯಾದ ಆಟೋ ಚಾಲಕ. ಈತ ಆಟೋ ಚಾಲಕ ವೃತ್ತಿ ಜೊತೆಗೆ ಫೈನಾನ್ಸ್ ವ್ಯವಹಾರ ಸಹ ನಡೆಸುತ್ತಿದ್ದರು. ಮಧ್ಯರಾತ್ರಿ 12.30ರ ಸುಮಾರಿನಲ್ಲಿ ಶೇಖರ್ ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದಾಗ ಈತನನ್ನು ಹಿಂಬಾಲಿಸಿಕೊಂಡು ಮತ್ತೊಂದು ಬೈಕ್‍ನಲ್ಲಿ ಬಂದ ಇಬ್ಬರು ಏಕಾಏಕಿ ಶೇಖರ್ ಅವರನ್ನು ಅಡ್ಡಗಟ್ಟಿ ದೊಣ್ಣೆಯಿಂದ ಹೊಡೆದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಕಸಗುಡಿಸಿ, ಟಾಯ್ಲೆಟ್ ಕ್ಲೀನ್ ಮಾಡಲು 70 ಲಕ್ಷ ರೂ.ಗಳ ಟೆಂಡರ್ !
ಹಲ್ಲೆಯಿಂದಾಗಿ ಶೇಖರ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಈ ಮಾರ್ಗದಲ್ಲಿ ಹೋಗುತ್ತಿದ್ದವರು ನೋಡಿ ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಶೇಖರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮನೆ ಸಮೀಪದಲ್ಲೇ ಈ ಕೃತ್ಯ ನಡೆದಿದ್ದು, ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ದೃಶ್ಯ ರಸ್ತೆಯ ಅಕ್ಕ-ಪಕ್ಕದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹಣಕಾಸು ವ್ಯವಹಾರದಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
6 ದಿನದಲ್ಲಿ 50 ಕೋಟಿ ಟ್ರಾಫಿಕ್ ದಂಡ ಸಂಗ್ರಹ
ಶೇಖರ್ ರಾತ್ರಿ ಇಬ್ಬರ ಜೊತೆ ಹಣಕಾಸು ವಿಚಾರಕ್ಕೆ ಜಗಳ ಮಾಡಿಕೊಂಡು ಮನೆಗೆ ಹೋಗುತ್ತಿದ್ದಾಗ ಬೈಕ್‍ನಲ್ಲಿ ಬೆನ್ನಟ್ಟಿ ಬಂದು ಕೊಲೆ ಮಾಡಿದ್ದು, ಜಗಳವಾಡಿದ್ದವರೇ ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಬಾಣಸವಾಡಿ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.
Auto, driver, killed, Bengaluru,