Thursday, May 2, 2024
Homeಮನರಂಜನೆಪ್ರೇಕ್ಷಕನ ಮುಂದೆ ಬಂದ 'ಅವತಾರ ಪುರುಷ' ಶರಣ್

ಪ್ರೇಕ್ಷಕನ ಮುಂದೆ ಬಂದ ‘ಅವತಾರ ಪುರುಷ’ ಶರಣ್

ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ ಅವತಾರ ಪುರುಷ-2 ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ.

ಇತ್ತೀಚೆಗೆ ತಂಡ, ಚಿತ್ರವನ್ನು ಪ್ರೇಕ್ಷಕ ಯಾಕೆ ನೋಡಬೇಕು ಎನ್ನುವುದನ್ನು ಹೇಳಿತ್ತು. ಅವತಾರ ಪುರುಷ ಮೊದಲ ಭಾಗವನ್ನು ಚಿತ್ರಮಂದಿರ, ಒಟಿಟಿ ಹಾಗೂ ಖಾಸಗಿ ವಾಹಿನಿಯಲ್ಲಿ ಸಾಕಷ್ಟು ಜನರು ವೀಕ್ಷಿಸಿದ್ದಾರೆ. ಅದೇ ರೀತಿ ಈ ಚಿತ್ರದ ಎರಡನೇ ಭಾಗವನ್ನು ನೋಡಿ ಯಶಸ್ವಿಗೊಳಿಸಿ ಮೊದಲ ಭಾಗವನ್ನು ನೋಡಿದವರಿಗೆ ಹಾಗೂ ನೋಡದವರಿಗೆ ಇಬ್ಬರಿಗೂ ಭಾಗ-2 ಅರ್ಥವಾಗುತ್ತದೆ ಎನ್ನುತ್ತಾರೆ ನಿರ್ದೇಶಕ ಸಿಂಪಲ್ ಸುನಿ.

ಇದೊಂದು ವಿಭಿನ್ನ ಕಥೆ ಈ ಕಥೆಯಲ್ಲಿ ಕಾಮಿಡಿ ಕೂಡ ಇರುತ್ತದೆ ಪಾತ್ರ ಇಷ್ಟವಾಯಿತು. ಚಿತ್ರ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಮೂಡಿಬಂದಿದೆ. ಎಲ್ಲರೂ ಚಿತ್ರವನ್ನು ನೋಡಿ ಪೊ್ರೀತ್ಸಾಹಿಸಿ ಎನ್ನುತ್ತಾರೆ ನಟ ಶರಣ್. ಯಾವುದೇ ಕೊರತೆಯಿಲ್ಲದೆ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ.

ನಾನು ಬೇರೆ ಭಾಷೆಗಳ ಚಿತ್ರಗಳಲ್ಲಿ ನಟಿಸುತ್ತಿದ್ದಾಗ ಅವತಾರ ಪುರುಷ-2 ಚಿತ್ರ ಯಾವಾಗ ಬಿಡುಗಡೆ ಎಂದು ಕೇಳುತ್ತಿದ್ದರು. ಜನರಿಗೆ ಈ ಚಿತ್ರದ ಬಗ್ಗೆ ಅಷ್ಟು ಕುತೂಹಲವಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿದೆ ಎಂದು ನಟಿ ಆಶಿಕಾ ರಂಗನಾಥ್ ತಿಳಿಸಿದರು. ವಿತರಕ ಮೋಹನ್ ಸೇರಿದಂತೆ ಅನೇಕರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಶರಣï, ಆಶಿಕಾ ರಂಗನಾಥ್, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ಸಾಧುಕೋಕಿಲ, ಸುಧಾರಾಣಿ, ಭವ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

RELATED ARTICLES

Latest News