Sunday, November 10, 2024
Homeರಾಷ್ಟ್ರೀಯ | Nationalಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರು

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರು

ಲಕ್ನೋ,ಡಿ.29- ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್ ಎಂದು ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಹೊಸ ವಿಮಾನ ನಿಲ್ದಾಣ ವನ್ನು ಶನಿವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ವಿಮಾನ ನಿಲ್ದಾಣದ ಆರಂಭಿಕ ಹಂತವು ಜನವರಿ 6 ರಿಂದ ವಿಮಾನ ಹಾರಾಟ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ.


ಜನವರಿ 22 ರಂದು ರಾಮಮಂದಿರ ಉದ್ಘಾಟನಾ ಸಮಾರಂಭದ ಮೊದಲು, ಪ್ರಧಾನಿ ಮೋದಿ ಹೊಸ ವಿಮಾನ ನಿಲ್ದಾಣ ಮತ್ತು ನವೀಕರಿಸಿದ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಈ ಹಿಂದೆ ವಿಮಾನ ನಿಲ್ದಾಣಕ್ಕೆ ಮರ್ಯಾದಾ ಪುರುಷೋತ್ತಮ ಶ್ರೀ ರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯೆ ಎಂದು ಹೆಸರಿಡುವುದಾಗಿ ತೀರ್ಮಾನ ಮಾಡಲಾಗಿತ್ತು. ಆದರೆ ಇದೀಗ ಮಹರ್ಷಿ ವಾಲ್ಮೀಕಿ ಎಂದು ನಾಮಕರಣ ಮಾಡುವ ಸಾಧ್ಯತೆಗಳಿವೆ.

ಉದ್ಘಾಟನೆಯ ದಿನದಂದು ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‍ಪ್ರೆಸ್‍ನಿಂದ ಮೊದಲ ವಿಮಾನಗಳು ಕಾರ್ಯನಿರ್ವಹಿಸಲಿವೆ. ಎರಡು ವಿಮಾನಯಾನ ಸಂಸ್ಥೆಗಳು ಕೂಡ ಈಗಾಗಲೇ ದೆಹಲಿ, ಮುಂಬೈ ಮತ್ತು ಅಹಮದಾಬಾದ್‍ನಿಂದ ಅಯೋಧ್ಯೆಗೆ ವಿಮಾನಗಳನ್ನು ಘೋಷಿಸಿದ್ದು, ಜನವರಿ 2024 ರಲ್ಲಿ ಹಾರಾಟ ಪ್ರಾರಂಭವಾಗುತ್ತದೆ.

ದೇಣಿಗೆ ಸಂಗ್ರಹಕ್ಕೆ ಬಾರ್ ಕೋಡ್ ಮೊರೆ ಹೋದ ಕಾಂಗ್ರೆಸ್

ವಿಮಾನ ನಿಲ್ದಾಣದ ಮೊದಲ ಹಂತದ ನಿರ್ಮಾಣಕ್ಕೆ ಅಂದಾಜು 1,450 ಕೋಟಿ ರೂ. ವೆಚ್ಚವಾಗಿದೆ. ಸುಮಾರು 6,500 ಚದರ ಮೀಟರ್‍ಗಳಷ್ಟು ವಿಸ್ತಾರವಾಗಿರುವ ಹೊಸ ಟರ್ಮಿನಲ್ ಕಟ್ಟಡವು ಪೀಕ್ ಅವರ್‍ನಲ್ಲಿ 600 ಮಂದಿ ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವಂತೆ ನಿರ್ಮಾಣ ಮಾಡಲಾಗಿದೆ. ಇನ್ನು ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮಥ್ರ್ಯವನ್ನು ಹೊಂದಿದೆ.

ಮೊದಲ ಹಂತದ ಅತ್ಯಾಧುನಿಕ ವಿಮಾನ ನಿಲ್ದಾಣವನ್ನು 1,450 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದರ ಟರ್ಮಿನಲ್ ಕಟ್ಟಡವು 6,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುತ್ತದೆ, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಸಜ್ಜುಗೊಂಡಿದೆ.

ಎರಡನೇ ಹಂತದ ಅಭಿವೃದ್ಧಿಯಲ್ಲಿ 50,000 ಚದರ ಮೀಟರ್‍ನ ಹೊಸ ಟರ್ಮಿನಲ್ ಕಟ್ಟಡವನ್ನು ನಿರ್ಮಿಸಲಾಗುವುದು. ಪೀಕ್ ಅವರ್‍ಗಳಲ್ಲಿ 3 ಸಾವಿರ ಮಂದಿ ಪ್ರಯಾಣಿಕರು ಹಾಗೂ ವಾರ್ಷಿಕ 60 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮಥ್ರ್ಯ ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಷ್ಠಾಪನೆಯ ನಂತರ ರಾಮ ಮಂದಿರಕ್ಕೆ ಪ್ರತಿದಿನದ ಸಂದರ್ಶಕರ ಒಳಹರಿವನ್ನು ಸರಿಹೊಂದಿಸಲು ಏರ್ಲೈನ್ಸ್ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿಮಾನಗಳನ್ನು ಒದಗಿಸುತ್ತದೆ. ಕಟ್ಟಡದ ಮುಂಭಾಗವು ರಾಮ ಮಂದಿರದ ವಾಸ್ತುಶಿಲ್ಪವನ್ನು ಚಿತ್ರಿಸುತ್ತದೆ. ಒಳಭಾಗದಲ್ಲಿ ಸ್ಥಳೀಯ ಕಲೆ, ವರ್ಣಚಿತ್ರಗಳು ಮತ್ತು ಭಗವಾನ್ ರಾಮನ ಜೀವನವನ್ನು ಚಿತ್ರಿಸುವ ಭಿತ್ತಿಚಿತ್ರಗಳಿಂದ ಅಲಂಕರಿಸಲಾಗಿದೆ.

ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ

ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ, ಎಲïಇಡಿ ಲೈಟಿಂಗ್, ಮಳೆ-ನೀರು ಕೊಯ್ಲು, ಕಾರಂಜಿಗಳೊಂದಿಗೆ ಭೂದೃಶ್ಯ, ನೀರು ಸಂಸ್ಕರಣಾ ಘಟಕ, ಒಳಚರಂಡಿ ಸಂಸ್ಕರಣಾ ಘಟಕ, ಸೌರ ವಿದ್ಯುತ್ ಸ್ಥಾವರ ಮತ್ತು ಇತರ ಹಲವು ಸೌಲಭ್ಯಗಳಂತಹ ವಿವಿಧ ಸಮರ್ಥನೀಯ ವೈಶಿಷ್ಟ್ಯಗಳನ್ನು ಇದು ಹೊಂದಿದೆ. ವಿಮಾನ ನಿಲ್ದಾಣವು ಈ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದ್ದು ಇದು ಪ್ರವಾಸೋದ್ಯಮ, ವ್ಯಾಪಾರ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳಲ್ಲಿ ಉತ್ತೇಜನಕ್ಕೆ ಕಾರಣವಾಗುತ್ತದೆ.

RELATED ARTICLES

Latest News