ಅಯೋಧ್ಯೆ,ಅ.28- ಈ ದೀಪಾವಳಿಯಂದು ಆಯೋಧ್ಯೆಯ ಶ್ರೀ ರಾಮ ಜನಭೂಮಿ ದೇವಾಲಯದ ಆವರಣದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಲು ನಿರ್ಧರಿಸಲಾಗಿದೆ. ದೇವಾಲಯ ಲೋಕರ್ಪಣೆಗೊಂಡ ನಂತರ ಬರುತ್ತಿರುವ ಮೊದಲ ದೀಪಾವಳಿಯಂದು ಆಯೋಧ್ಯೆ ರಾಮಮಂದಿರದಲ್ಲಿ ದೀಪೋತ್ಸವ ಆಚರಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.
ರಾಮ ಜನಭೂಮಿ ದೇವಸ್ಥಾನದಲ್ಲಿ ಮೊದಲ ದೀಪಾವಳಿಗೆ ಭವ್ಯವಾದ ಮತ್ತು ಪರಿಸರ ಪ್ರಜ್ಞೆ ಸಿದ್ಧತೆಗಳು ನಡೆಯುತ್ತಿವೆ ಎಂದು ಸರ್ಕಾರದ ಮೂಲಗಳು ತಿಳಸಿವೆ.ಈ ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ರಚಿಸುವ ಗುರಿಯನ್ನು ಉತ್ತರ ಪ್ರದೇಶ ಸರ್ಕಾರ ಹೊಂದಿದೆ, ಆದರೆ ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸುತ್ತವೆ.
ದೇವಾಲಯದ ರಚನೆಯ ಮೇಲೆ ಕಲೆಗಳು ಮತ್ತು ಮಸಿಗಳು ಪರಿಣಾಮ ಬೀರುವುದನ್ನು ತಡೆಯಲು ಈ ದೀಪಗಳನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ದೀರ್ಘಕಾಲದವರೆಗೆ ಬೆಳಗುತ್ತದೆ ಎಂದು ತಿಳಿದುಬಂದಿದೆ.ಈ ದೀಪೋತ್ಸವದಲ್ಲಿ ಪರಿಸರ ಸಂರಕ್ಷಣೆಯೂ ಪ್ರಮುಖ ಕೇಂದ್ರವಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ಮಸಿ ಹಾನಿಯಿಂದ ದೇವಾಲಯವನ್ನು ರಕ್ಷಿಸಲು ವಿಶೇಷ ಮೇಣದ ದೀಪಗಳನ್ನು ಬಳಸಲಾಗುವುದು ಎಂದು ಅದು ಹೇಳಿದೆ. ವಿಶೇಷ ಹೂವಿನ ಅಲಂಕಾರದಿಂದ ಕಂಗೊಳಿಸಲಿರುವ ರಾಮ ಮಂದಿರ ಸಂಕೀರ್ಣವನ್ನು ಅಲಂಕಾರಕ್ಕಾಗಿ ವಿವಿಧ ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಿಭಾಗಕ್ಕೆ ನಿರ್ದಿಷ್ಟ ಜವಾಬ್ದಾರಿಗಳನ್ನು ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಕು, ಪ್ರವೇಶ ಕಮಾನು ಅಲಂಕಾರಗಳು ಮತ್ತು ಸಂಪೂರ್ಣ ಶುಚಿಗೊಳಿಸುವಿಕೆಯ ಒಟ್ಟಾರೆ ಮೇಲ್ವಿಚಾರಣೆಯನ್ನು ಬಿಹಾರ ಕೇಡರ್‌ನ ನಿವತ್ತ ಐಜಿ ಅಶು ಶುಕ್ಲಾ ಅವರಿಗೆ ವಹಿಸಲಾಗಿದೆ. ಈ ದೀಪಾವಳಿಯಲ್ಲಿ ಅಯೋಧ್ಯೆಯನ್ನು ಕೇವಲ ಧರ್ಮ ಮತ್ತು ನಂಬಿಕೆಯ ಕೇಂದ್ರವನ್ನಾಗಿ ಮಾಡದೆ, ಸ್ವಚ್ಛತೆ ಮತ್ತು ಪರಿಸರ ಪ್ರಜ್ಞೆಯ ಸಂಕೇತವನ್ನಾಗಿ ಮಾಡುವ ಗುರಿಯನ್ನು ದೇವಾಲಯದ ಟ್ರಸ್ಟ್ ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.
ದೀಪೋತ್ಸವದ ವೈಭವವು ಶಾಶ್ವತವಾದ ಪ್ರಭಾವ ಬೀರುವುದನ್ನು ಖಚಿತಪಡಿಸಿಕೊಳ್ಳಲು, ರಾಮ ಜನಭೂಮಿ ತೀರ್ಥ ಕ್ಷೇತ್ರವು ನಾಳೆಯಿಂದ ನವೆಂಬರ್ 1 ರ ಮಧ್ಯರಾತ್ರಿಯವರೆಗೆ ದೇವಸ್ಥಾನವನ್ನು ಭವನ ದರ್ಶನಕ್ಕಾಗಿ ತೆರೆದಿಡಲು ನಿರ್ಧರಿಸಿದೆ ಎಂದು ಅದು ಹೇಳಿದೆ.