Thursday, November 21, 2024
Homeರಾಜ್ಯಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

Ayudha Puja at Mysuru Palace

ಮೈಸೂರು, ಅ. 11- ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ಶರನ್ನವರಾತ್ರಿಯ 9ನೇ ದಿನವಾದ ಇಂದು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನಡೆಸಲಾಯಿತು. ರಾಜ ಪರಂಪರೆಯಂತೆ ಶುಕ್ರವಾರ ಬೆಳಗ್ಗೆ ಯದು ವಂಶಸ್ಥ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ದುರ್ಗಾಷ್ಟಮಿ ಪೂಜಾ ಕೈಂಕರ್ಯ ನೆರವೇರಿಸಿದರು.

ಬೆಳಗ್ಗೆ 6ಕ್ಕೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾ ಹೋಮ ನಡೆಯಿತು. ಆ ವೇಳೆಗೆ ಆನೆ ಬಾಗಿಲಿಗೆ ಪಟ್ಟದ ಹಸು ಆಗಮನವಾಯಿತು. ಬೆಳಗ್ಗೆ 6.40ರಿಂದ 7.10ರ ಸಮಯದಲ್ಲಿ ಅರಮನೆ ಕಲ್ಯಾಣ ಮಂಟಪದಿಂದ ಆನೆ ಬಾಗಿಲಿನ ಮೂಲಕ ಆಯುಧಗಳನ್ನು ಕೋಡಿ ಸೋಮೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅವುಗಳನ್ನು ಸ್ವಚ್ಛಗೊಳಿಸಿ 7.30ರಿಂದ 8 ಗಂಟೆಯವರೆಗೆ ಕಲ್ಯಾಣ ಮಂಟಪಕ್ಕೆ ತರಲಾಯಿತು. ಬೆಳಗ್ಗೆ 9.05ಕ್ಕೆ ಚಂಡಿಕಾ ಹೋಮ, ಪೂರ್ಣಾಹುತಿ ಆದ ಬಳಿಕ ಮಧ್ಯಾಹ್ನ 12.20ರಿಂದ 12.45ರವರೆಗೆ ಕಲ್ಯಾಣ ಮಂಟಪದಲ್ಲಿ ಯದುವೀರ್ ಆಯುಧಗಳಿಗೆ ಪೂಜೆ ಸಲ್ಲಿಸಿದರು.

ಬಳಿಕ ಆನೆ ತೊಟ್ಟಿಯಲ್ಲಿ ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟದ ಆನೆ, ಪಲ್ಲಕ್ಕಿ ಹಾಗೂ ರಾಜರು ಬಳಸುವ ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಸಿದರು.ಸಂಜೆ ರತ್ನ ಖಚಿತ ಸಿಂಹಾಸನದಲ್ಲಿ ಖಾಸಗಿ ದರ್ಬಾರ್ ನಡೆಸಿ, ಬಳಿಕ ಸಿಂಹಾಸನದಲ್ಲಿ ಜೋಡಿಸಲಾದ ಸಿಂಹದ ತಲೆಯನ್ನು ವಿಸರ್ಜನೆ ಮಾಡುತ್ತಾರೆ.

ಇದಾದ ನಂತರ ದಪ್ತಾರ್ ಪೂಜೆ, ಅಂಬಾವಿಲಾಸ ಪೂಜೆ ನಡೆಸಿದ ನಂತರ ದೇವರ ದರ್ಶನ ಪಡೆಯಲಿರುವ ಯದುವೀರ್ ಅವರು , ನವರಾತ್ರಿ ಪೂಜೆ ಸಮಾಪನಗೊಳಿಸುತ್ತಾರೆ.

RELATED ARTICLES

Latest News