ಆಯುರ್ವೇದ ಚಿಕಿತ್ಸೆ ನೆಪದಲ್ಲಿ ವಂಚನೆ, ರಾಜಸ್ತಾನದ ಮೂವರ ಬಂಧನ

Social Share

ಬೆಂಗಳೂರು, ಜ.3- ಆಯುರ್ವೇದ ಚಿಕಿತ್ಸೆ ನೀಡುವುದಾಗಿ ವೈದ್ಯರಂತೆ ನಟಿಸಿ ಸಾರ್ವಜನಿಕರಿಂದ ಹಣ ಪಡೆದು ಮೋಸ ಮಾಡುತ್ತಿದ್ದ ಹೊರ ರಾಜ್ಯದ ಮೂವರು ಆರೋಪಿಗಳನ್ನು ವಿಲ್ಸನ್‍ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ತಾನ ಮೂಲದ ಮೊಹಮ್ಮದ್ ಸಮೀನ್ ಅಲಿಯಾಸ್ ಡಾ. ಮಲ್ಲಿಕ್(50), ಶೈಫ್ ಅಲಿ(25) ಮತ್ತು ಮೊಹಮ್ಮದ್ ರಹೀಸ್(55) ಬಂಧಿತ ವಂಚಕರು. ಬಂಧಿತರಿಂದ ಆಯುರ್ವೇದ ಚಿಕಿತ್ಸೆ ನೀಡಲು ಬಳಸುತ್ತಿದ್ದ ಸಾಮಗ್ರಿಗಳು, ನಾಲ್ಕು ಕಾರುಗಳು, ಮೂರು ದ್ವಿಚಕ್ರ ವಾಹನ ಹಾಗೂ 3.50 ಲಕ್ಷ ರೂ. ನಗದು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ.

ನೆಲಮಂಗಲದ ಬಳಿ ಗುಡಿಸಲು ನಿರ್ಮಿಸಿಕೊಂಡು ಆಯುರ್ವೇದ ಚಿಕಿತ್ಸೆ ಕೊಡುವುದಾಗಿ ಸಾರ್ವಜನಿಕರನ್ನು ಇವರು ನಂಬಿಸುತ್ತಿದ್ದರು. ಶಾಂತಿನಗರ ಬಸಪ್ಪ ರಸ್ತೆಯ ನಿವಾಸಿ ಪಂಕಜ್ ರಾಠೋರ್ ಎಂಬುವರ ತಾಯಿಗೆ ಕಾಲು ನೋವು ಇದ್ದು, ಅವರು ಚಿಕಿತ್ಸೆಗಾಗಿ ಇಲ್ಲಿಗೆ ಬಂದಾಗ, ಕೀವು ತುಂಬಿಕೊಂಡಿರುವುದಾಗಿ ಅದನ್ನು ತೆಗೆಯಲು ಆಯುರ್ವೇದಿಕ್ ವೈದ್ಯರ ರೀತಿ ನಟಿಸಿ ಡಿ. 16ರಂದು ಆರೋಪಿ ಮೊಹಮ್ಮದ್ ಸಮೀನ್ ಇವರ ಮನೆಗೆ ಬಂದಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಪ್ರದೀಪ್ ಮನೆಗೆ ಕಾಂಗ್ರೆಸ್ ನಾಯಕರ ಭೇಟಿ

ಒಂದು ಡ್ರಾಪ್ ಕೀವು ತೆಗೆಯಲು 4 ಸಾವಿರ ರೂ. ಖರ್ಚಾಗುತ್ತದೆ ಎಂದು ಹೇಳಿ ಮತ್ತು ಅವರ ಕುಟುಂಬದವರಿಂದ ಒಟ್ಟು 8.8 ಲಕ್ಷ ಹಣವನ್ನು ಪಡೆದುಕೊಂಡು ಯಾವುದೇ ರೀತಿಯ ಚಿಕಿತ್ಸೆ ನೀಡದೇ ವಂಚಿಸಿ ಪರಾರಿಯಾಗಿದ್ದರು.

ಈ ಬಗ್ಗೆ ಅವರು ವಿಲ್ಸನ್‍ಗಾರ್ಡನ್ ಪೊಲೀಸರಿಗೆ ದೂರು ನೀಡಿದ್ದರು. ಕೇಂದ್ರ ವಿಭಾಗದ ಉಪಪೊಲೀಸ್ ಆಯುಕ್ತರಾದ ಶ್ರೀನಿವಾಸ ಗೌಡ, ಹಲಸೂರು ಗೇಟ್ ಉಪವಿಭಾಗದ ಸಹಾಯಕ ಪೆಪೊಲೀಸ್ ಆಯುಕ್ತ ನಾರಾಯಣ ಸ್ವಾಮಿ ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ರಾಜು ಅವರನ್ನೊಳಗೊಂಡ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡು ಮೂವರು ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್

ಈ ಉತ್ತಮ ಕಾರ್ಯವನ್ನು ಮಾಡಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಅಪರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಪ್ರಶಂಶಿಸಿರುತ್ತಾರೆ.

Ayurvedic treatment, cheating, Three Arrest,

Articles You Might Like

Share This Article