ಬೆಂಗಳೂರು,ಫೆ.20- ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆಗೆ ಈವರೆಗೂ 3 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿನ ಹಣ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ವಿಧಾನಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಮೂರು ವರ್ಷದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ-ಕರ್ನಾಟಕ ಯೋಜನೆಯಡಿ 1.78 ಕೋಟಿ ಮಂದಿ ನೋಂದಣಿಯಾಗಿದ್ದಾರೆ. 39,48,923 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಅವರಿಗೆ ರಾಜ್ಯ ಸರ್ಕಾರದ 2188 ಕೋಟಿ, ಕೇಂದ್ರ ಸರ್ಕಾರ 908 ಕೋಟಿ ರೂ. ಸೇರಿ ಒಟ್ಟು 3,097.19 ಕೋಟಿ ಖರ್ಚು ಮಾಡಲಾಗಿದೆ ಎಂದರು.
ಇದರಲ್ಲಿ. ಶೇ.80ರಷ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಕ್ಕೆ ಹಣ ಪಾವತಿಯಾಗಿದೆ. ಎರಡನೇ, ಮೂರನೇ ಹಂತದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಮಂದಿ ಚಿಕಿತ್ಸೆ ಪಡೆದಿದ್ದು, ಅವರಿಗೆ 2022ರವರೆಗೂ ಎಲ್ಲಾ ರೀತಿಯ ಬಾಕಿ ಬಿಲ್‍ಗಳನ್ನು ಪಾವತಿಸಲಾಗಿದೆ. ಸರ್ಕಾರದ ಆರೋಗ್ಯ ವಿಮಾ ಯೋಜನೆಯಡಿ ಖರ್ಚು ಮಾಡುತ್ತಿರುವ ಅನುದಾನ ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳ ನಡುವೆ ಶೇ.50: 50ರ ಅನುಪಾತದಲ್ಲಿ ಹಂಚಿಕೆಯಾಗಿದೆ. ಸರ್ಕಾರದ ಆಸ್ಪತ್ರೆಗಳಲ್ಲಿ ಮೂಲ ಸೌಲಭ್ಯಕ್ಕೂ ಇದು ನೆರವು ನೀಡಿದೆ ಎಂದರು.
ಜೂನ್ ತಿಂಗಳೊಳಗೆ 8 ಸಾವಿರ ಶಾಲಾ ಕೊಠಡಿಗಳು ನಿರ್ಮಾಣ : ಸಿಎಂ
ಇಡೀ ವಿಶ್ವದಲ್ಲೇ ಒಂದು ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಮಾತ್ರ ಜಾರಿಯಲ್ಲಿದೆ. ಆಯುಷ್ಮಾನ್ ಭಾರತ್ ಜನಸಾಮಾನ್ಯರಿಗೆ ಸಂಜೀವಿನಿಯಾಗಿದೆ ಎಂದು ಹೇಳಿದರ.
ಅರವಿಂದಕುಮಾರ್ ಅರಳಿ ಅವರು ಪ್ರಶ್ನೆ ಕೇಳಿ, ಬೀದರ್ ಜಿಲ್ಲೆಯಲ್ಲಿರುವ ಬ್ರಿಮ್ಸ್ ಮಹಾವಿದ್ಯಾಲಯ ದುಸ್ಥಿತಿಯಲ್ಲಿದೆ ಎಂದಾಗ ಬ್ರಿಮ್ಸ್‍ನಲ್ಲಿ ಅವ್ಯವಸ್ಥೆಗಳನ್ನು ಸರಿ ಪಡಿಸಲಾಗುವುದು. ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲೇ ಇರುವ ಇಂಜಿನಿಯರಿಂಗ್ ವಿಭಾಗದಿಂದ ನಿರ್ವಹಣೆ ಮಾಡಲಾಗುತ್ತಿತ್ತು. ಬ್ರಿಮ್ಸ್‍ನಲ್ಲಿನ ಕಾಮಗಾರಿಗಳನ್ನು 2013ರಲ್ಲಿ ಲೋಕೋಪಯೋಗಿ ಇಲಾಖೆಗೆ ನೀಡಲಾಗಿದೆ.
ಈವರೆಗೂ ಕಾಮಗಾರಿ ಮುಕ್ತಾಯವಾಗಿಲ್ಲ. ಆಸ್ಪತ್ರೆಯ ಎರಡನೇ ಮೂರನೇ ಮಹಡಿಯಲ್ಲಿ ಸೋರಿಕೆ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗುವುದು. ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮುಂದೆ ಯಾವುದೇ ಕೆಲಸ ನೀಡದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.
ತವರಿನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವುದು ಅಸಾಧ್ಯ : ರಮೀಜ್ ರಾಜಾ
ಆಕ್ಷೇಪ ವ್ಯಕ್ತಪಡಿಸಿದ ಅರವಿಂದ ಕುಮಾರ್ ಅರಳಿ, ಬೀದರ್‍ನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆದಾರರು, ಬೆಂಗಳೂರಿನಲ್ಲಿ ಮೇಟ್ರೋ ಕಾಮಗಾರಿಯ ಅವಗಡದಲ್ಲಿಯೂ ಆರೋಪಕ್ಕೆ ಗುರಿಯಾಗಿದ್ದಾರೆ. ಅವರ ವಿರುದ್ಧ ನಾಲ್ಕೈದು ವರ್ಷಗಳಿಂದ ಯಾವುದೇ ಕ್ರಮ ಸಾಧ್ಯವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಪ್ರತಿಕ್ರಿಯಿಸಿದ ಸಚಿವರು, ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ, ಗುತ್ತಿಗೆದಾರರ ವಿರುದ್ಧ ಲೋಕೋಪಯೋಗಿ ಇಲಾಖೆ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಪಷ್ಟ ಪಡಿಸಿದರು.
ಪ್ರಕಾಶ್ ರಾಥೋಡ್ ಪ್ರಶ್ನೆ ಕೇಳಿ, ಬಿಜಾಪುರ ಜಿಲ್ಲೆಯ ಮಕ್ಕಳ ಮತ್ತು ತಾಯಿಯ ಆಸ್ಪತ್ರೆಯಲ್ಲಿ ಬೆಡ್‍ಗಳ, ವೈದ್ಯರ ಕೊರತೆ ಇದೆ. ವೈದ್ಯರಿದ್ದರೂ ಬೆಡ್‍ಗಳು ಇಲ್ಲದಂತಾಗಿದೆ. ಈ ಆಸ್ಪತ್ರೆಗೆ ಮಹಾರಾಷ್ಟ್ರದಿಂದಲೂ ಚಿಕಿತ್ಸೆಗೆ ಜನ ಬರುತ್ತಿದ್ದಾರೆ. ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಿ ಎಂದರು.
ಮತ್ತೆ ಬೀದಿಗಿಳಿಯಲಿದ್ದಾರೆ ಸಾರಿಗೆ ನೌಕರರು
ಸಚಿವರು, 100 ಹಾಸಿಗೆಗಳ ಆಸ್ಪತ್ರೆಯನ್ನು 150ಕ್ಕೆ ಹೆಚ್ಚಿಸಲಾಗಿದೆ. ಅದನ್ನು 200ಕ್ಕೆ ಹೆಚ್ಚಿಸಲು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಈಗಾಗಲೇ ನಡೆಯುತ್ತಿರುವ ಕಾಮಗಾರಿಯನ್ನು ಏಪ್ರಿಲ್ ವೇಳೆಗೆ ಪೂರ್ಣಗೊಳಿಸಿ ಹೆಚ್ಚುವರಿ ಬೆಡ್‍ಗಳನ್ನು ಉದ್ಘಾಟಿಸಲಾಗುವುದು ಎಂದರು.
Ayushman Bharat Yojana, treatment, Minister, Sudhakar,