BREAKING : ಮದರಸಾಗಳಲ್ಲಿ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಲು ಸೂಚನೆ

Social Share

ಬೆಂಗಳೂರು,ಜು.18- ದೇಶದ 75ನೇ ಅಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಮದರಸಗಳಲ್ಲೂ ಕಡ್ಡಾಯವಾಗಿ ತಿರಂಗ ಹಾರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಇಲಾಖೆಯಿಂದ ಮತ್ತೊಂದು ಬಾರಿ ಸುತ್ತೋಲೆ ಹೊರಡಿಸಲಿದ್ದು, ಮದರಸಾಗಳು, ಪ್ರೌಢಶಾಲೆ, ಸರ್ಕಾರಿ ಶಾಲೆಗಳು,
ಅನುದಾನ, ಅನುದಾನರಹಿತ ಶಾಲೆಗಳು, ಪದವಿ, ಪದವಿಪೂರ್ವ ಕಾಲೇಜುಗಳು, ಅಂಗನವಾಡಿ ಕೇಂದ್ರಗಳಲ್ಲೂ ಕಡ್ಡಾಯವಾಗಿ ತಿರಂಗ ಅಭಿಯಾನವನ್ನು ನಡೆಸಬೇಕೆಂದು ಈಗಾಗಲೇ ಮೌಖಿಕ ಸೂಚನೆ ನೀಡಲಾಗಿದೆ.

ಕಳೆದ ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸುತ್ತೋಲೆಯನ್ನು ಹೊರಡಿಸಿತ್ತು. ಆದರೆ ಅದರಲ್ಲಿ ಮದರಸಾಗಳಲ್ಲಿ ತಿರಂಗ ಅಭಿಯಾನವನ್ನು ಕೈಗೊಳ್ಳಬೇಕೆಂಬ ಆದೇಶ ಇರಲಿಲ್ಲ. ಒಂದೆರಡು ದಿನದಲ್ಲಿ ಮತ್ತೊಂದು ಸುತ್ತೋಲೆ ಹೊರಡಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮುಂದಾಗಿದ್ದಾರೆ. ಇದರಂತೆ ಮದರಸಾಗಳಲ್ಲೂ ತಪ್ಪದೇ ತಿರಂಗ ಅಭಿಯಾನವನ್ನು ಕೈಗೊಳ್ಳಬೇಕು.

ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಪೂರೈಸುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ¾ಹರ್ ಘರ್ ತಿರಂಗಾ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಮುಂದಾಗಿದೆ. ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.

ಸರ್ಕಾರಿ, ಅನುದಾನಿತ, ಅನದಾನ ರಹಿತ ಶಾಲಾ-ಕಾಲೇಜುಗಳು, ಎಲ್ಲಾ ಮದರಸಾಗಳು ಈ ಅದೇಶವನ್ನು ಪಾಲಿಸಬೇಕು. ತ್ರಿವರ್ಣ ಧ್ವಜದ ಜೊತೆಗೆ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಮೆಲುಕು ಹಾಕುವ ಗೀತ ಗಾಯನ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಡೆಸಬೇಕು.

ಕ್ವಿಜ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜನೆ ಮಾಡಬೇಕು ಎಂದು ಸೂಚಿಸುವಂತೆ ಹೇಳಿದ್ದಾರೆ. ಮುಖ್ಯವಾಗಿ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಲಾಗಿದೆ.

Articles You Might Like

Share This Article