Friday, June 14, 2024
Homeಇದೀಗ ಬಂದ ಸುದ್ದಿಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ವಿಚಾರಣೆ ಮಾಡುತ್ತಿದ್ದೇವೆ : ಬಿ.ದಯಾನಂದ್‌

ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ವಿಚಾರಣೆ ಮಾಡುತ್ತಿದ್ದೇವೆ : ಬಿ.ದಯಾನಂದ್‌

ಬೆಂಗಳೂರು,ಜೂ.11- ಕೊಲೆ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡ ಚಿತ್ರರಂಗದ ನಟ ದರ್ಶನ್‌ ಹಾಗೂ ಆತನ ಸಹಚರರನ್ನು ಬಂಧಿಸಿ ಕೂಲಂಕುಷವಾಗಿ ವಿಚಾರಣೆಗೊಳಪಡಿಸಲಾಗುತ್ತಿದೆ. ಸದ್ಯಕ್ಕೆ ತನಿಖೆ ಪ್ರಗತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದರು.

ಚಿತ್ರನಟನ ಪತ್ನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎಂದು ಪ್ರಾಥಮಿಕ ಹಂತದ ಮಾಹಿತಿಯಲ್ಲಿ ತಿಳಿದುಬಂದಿದೆ. ಸುಮಾರು 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಸದ್ಯದಲ್ಲಿ ದರ್ಶನ್‌ರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ. ಮುಂದಿನ ಹಂತದಲ್ಲಿ ಉಳಿದ ಪ್ರಕ್ರಿಯೆಗಳನ್ನು ಮುಂದುವರೆಸಲಾಗುವುದು ಎಂದು ಹೇಳಿದರು.

ಕಾಮಾಕ್ಷಿಪಾಳ್ಯ ಪೊಲೀಸ್‌‍ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ದರ್ಶನ್‌ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

RELATED ARTICLES

Latest News