Monday, November 25, 2024
Homeರಾಜಕೀಯ | Politics"ಸಂಪುಟದಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಬ್ಲಾಕ್‌ಮೇಲ್‌ ಮಾಡಿದ್ದಾರೆ"

“ಸಂಪುಟದಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಬ್ಲಾಕ್‌ಮೇಲ್‌ ಮಾಡಿದ್ದಾರೆ”

ಬೆಂಗಳೂರು, ಜೂ.3– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಹಿನ್ನೆಲೆಯಲ್ಲಿ ತಮನ್ನು ಸಚಿವ ಸಂಪುಟದಿಂದ ಸಭೆಯಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಮುಖ್ಯಮಂತ್ರಿಯವರನ್ನು ಬ್ಲಾಕ್‌ಮೇಲ್‌ ಮಾಡಿದ್ದಾರೆ ಎಂದು ವಿಧಾನಪರಿಷತ್‌ನ ವಿರೋಧಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಮ ಆರೋಪವನ್ನು ಪುನರ್‌ ಉಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದಲ್ಲಿ 187 ಕೋಟಿ ರೂ.ಗಳ ದೊಡ್ಡ ಮೊತ್ತದ ಹಗರಣ ನಡೆದಿದೆ. ಅಕ್ರಮವಾಗಿ ವರ್ಗಾವಣೆಯಾಗಿರುವ ಹಣ ತೆಲಂಗಾಣಕ್ಕೆ ಹೋಗಿದೆ. ಈ ಸಂಬಂಧಪಟ್ಟಂತೆ ನಾಗೇಂದ್ರ ಅವರ ರಾಜೀನಾಮೆ ಪಡೆಯುವ ತಾಕತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ ಎಂದೆನಿಸುತ್ತಿದೆ ಎಂದರು.

ನಾಗೇಂದ್ರ ಅವರ ಬ್ಲಾಕ್‌ಮೇಲ್‌ಗೆ ಹೆದರಿ ಸಿದ್ದರಾಮಯ್ಯ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.ಮುಂದಿನ ದಿನಗಳಲ್ಲಿ ವಿಧಾನಪರಿಷತ್‌ನ ವಿರೋಧಪಕ್ಷದ ನಾಯಕನನ್ನಾಗಿ ಯಾರನ್ನು ಆಯ್ಕೆ ಮಾಡುತ್ತಾರೋ ಗೊತ್ತಿಲ್ಲ. ಸಿ.ಟಿ.ರವಿ ಸೇರಿದಂತೆ ಅನೇಕರು ಸಮರ್ಥರಿದ್ದಾರೆ. ಆದರೆ ಅಂತಿಮ ತೀರ್ಮಾನವನ್ನು ಪಕ್ಷ ತೆಗೆದುಕೊಳ್ಳಲಿದೆ ಎಂದರು.

ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ತಿಳಿಸಿದೆ. ನರೇಂದ್ರಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ. ಸಮೀಕ್ಷೆಗಳು ಸರಿಯಾಗಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

RELATED ARTICLES

Latest News