Wednesday, May 8, 2024
Homeರಾಜ್ಯಮೋದಿಯವರ ದಿಟ್ಟ ನಾಯಕತ್ವದಲ್ಲಿ ಭಾರತ ರಾಮರಾಜ್ಯವಾಗುತ್ತದೆ : ಬಿಎಸ್‌ವೈ

ಮೋದಿಯವರ ದಿಟ್ಟ ನಾಯಕತ್ವದಲ್ಲಿ ಭಾರತ ರಾಮರಾಜ್ಯವಾಗುತ್ತದೆ : ಬಿಎಸ್‌ವೈ

ಬೆಂಗಳೂರು,ಜ.7- ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಾಯಕತ್ವದಲ್ಲಿ ಭಾರತ ರಾಮರಾಜ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ನಿವೃತ್ತ ನ್ಯಾಯಮೂರ್ತಿ ಪತ್ರೆ ಬಸವನಗೌಡ ಅವರ ಮನೆಯೂ ಸೇರಿದಂತೆ ಹಲವು ಮನೆಗಳಿಗೆ ಭೇಟಿ ನೀಡಿ, ಮಂತ್ರಾಕ್ಷತೆಯನ್ನು ವಿತರಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ಹಿಂದೂಗಳು ಶತಮಾನಗಳಿಂದ ಕಂಡಿರುವ ಕನಸು ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆಯನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಕರಸೇವಕರು ಮಾಡುತ್ತಿದ್ದಾರೆ ಎಂದು ಹೇಳಿದರು.

ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ಕರಸೇವಕನಾಗಿ ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದು ನನ್ನ ಬಾಳಿನ ಸುದಿನ. ಈಗ ಮತ್ತೊಮ್ಮೆ ಕರಸೇವಕನಾಗಿ ರಾಮನ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದರು. ರಾಮಮಂದಿರದ ಜೊತೆಗೆ ದೇಶ ರಾಮರಾಜ್ಯವಾಗುತ್ತಿದೆ ಎಂದು ಹೇಳುವುದಕ್ಕೆ ನನಗೆ ಯಾವುದೇ ಮುಜುಗರ ಇಲ್ಲ. ಟೀಕೆ, ಟಿಪ್ಪಣಿಗಳಿಗೆ ಉತ್ತರ ನೀಡುವುದಿಲ್ಲ. ನಾವು ನಮ್ಮ ಪಾಲಿನ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇವೆ ಎಂದು ಹೇಳಿದರು.

RELATED ARTICLES

Latest News