Wednesday, January 22, 2025
Homeರಾಜ್ಯಬಿಜೆಪಿ ಬಿಡುವ ಸುಳಿವು ನೀಡಿದ ಬಿ.ಶ್ರೀರಾಮುಲು..!?

ಬಿಜೆಪಿ ಬಿಡುವ ಸುಳಿವು ನೀಡಿದ ಬಿ.ಶ್ರೀರಾಮುಲು..!?

B. Sriramulu hints at leaving BJP..!?

ಬೆಂಗಳೂರು : ರಾಜ್ಯ ಬಿಜೆಪಿಯೊಳಗಿನ‌ ಬಣ ಬಡುದಾಟ ಜೋರಾಗಿರುವ ಬೆನ್ನಲ್ಲೇ, ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಈ ದಿಢೀರ್ ಬೆಳವಣಿಗೆ ಬಿಜೆಪಿಗೆ ಭಾರೀ ಆಘಾತ ನೀಡಿದ್ದು, ಒಂದು ವೇಳೆ ರಾಮುಲು ಬಿಜೆಪಿ ಪಕ್ಷ ಬಿಡುವ ನಿರ್ಧಾರಕ್ಕೆ ಬಂದರೆ ಪರಿಶಿಷ್ಟ ವರ್ಗದ ಮತಗಳು ಕೈ ತಪ್ಪುವ ಆತಂಕ ಕಮಲ ಪಕ್ಷಕ್ಕೆ ಎದುರಾಗಿದೆ.

ಬಿಜೆಪಿಗೆ ನಾನು ಇಷ್ಟವಿಲ್ಲ ಎಂದು ಹೇಳಿದರೆ, ಪಕ್ಷ ಬಿಡಲು ಸಿದ್ದ ಎಂದು ರಾಮುಲು ಬಹಿರಂಗವಾಗಿ ತಮ್ಮ ಅಸಮಧಾನ ಹೊರ ಹಾಕುತ್ತಿದ್ದಂತೆ ಅವರನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳಲು ಸಂಧಾನಕ್ಕೆ ಮುಖಂಡರು ಮುಂದಾಗಿದ್ದಾರೆ.

ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆದಿತ್ತು.ಸಂಡೂರು ಚುನಾವಣೆಯ ಬಳಿಕ ಶ್ರೀರಾಮುಲು ವಿರುದ್ಧ ಬಿಜೆಪಿ ನಾಯಕರಿಗೆ ಅಭ್ಯರ್ಥಿಯಾಗಿದ್ದ ಬಂಗಾರು ಹನುಮಂತು ದೂರು ನೀಡಿದ್ದರು.ಇನ್ನು ಆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ನಾಯಕರ ಶ್ರಮ ಸಾಕಾಗಿಲ್ಲ ಎಂದು ಶ್ರೀರಾಮುಲು ಅವರನ್ನು ಸೇರಿಸಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ಕಾರಣಕ್ಕಾಗಿ ರಾಜ್ಯ ಉಸ್ತುವಾರಿ ರಾಧ ಮೋಹನ್ ದಾಸ್ ತರಾಟೆಗೆ ತೆಗೆದುಕೊಂಡಿದ್ದರು.ಸಭೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ಉಸ್ತುವಾರಿ ರಾಧಾ ಮೋಹನ್ ದಾಸ್ ವಿರುದ್ಧ ಕೆಂಡಾಮಂಡಲರಾಗಿದ್ದು, ಪಕ್ಷ ತೊರೆಯುವ ಮಾತುಗಳನ್ನಾಡಿದ್ದಾರೆ. ಅಲ್ಲದೇ ದೂರವಾಣಿ ಮೂಲಕ ಹೈಕಮಾಂಡ್ ನಾಯಕರಿಗೆ ದೂರು ನೀಡಿದ್ದಾರೆ.

ಉಪಚುನಾವಣೆಯಲ್ಲಿ ಶ್ರೀರಾಮುಲು ಕೆಲಸ ಮಾಡಿಲ್ಲ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಸಭೆಯಲ್ಲೇ ಪ್ರಶ್ನಿಸಿದರು ಎಂದುತಿಳಿದು ಬಂದಿದೆ.

ರಾಧಾಮೋಹನ್ ದಾಸ್​ ಅಗರ್ವಾಲ್​ ಏನೋ ಉತ್ತರ ಪ್ರದೇಶದವರು. ರಾಜ್ಯಾಧ್ಯಕ್ಷರಾಗಿ ನೀವಾದರೂ ಹೇಳಿ ನಮ್ಮ ರಕ್ಷಣೆಗೆ ಬರಬೇಕಲ್ಲವೇ? ಎಂದು ವಿಜಯೇಂದ್ರ ಅವರನ್ನು ಹೇಳಿದ್ದಾರೆ. ಇದಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿ, ಇಲ್ಲ, ನನ್ನ ಬಗ್ಗೆಯೂ ಹೀಗೆ ಹೇಳಿದ್ದಾರೆ ಉತ್ತರಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರಾಮುಲು, ನಿಮಗೆ ಇಷ್ಟ ಇಲ್ಲ ಎಂದಾದರೆ ಬೇಕಾದರೆ ನಾನು‌ ಪಕ್ಷ ಬಿಡುತ್ತೇನೆ. ಆದರೆ ಪಕ್ಷ ಬಿಡುವ ಮುನ್ನ ಏನು ಆಗಿದೆ ಎಂದು ಹೇಳಿ ಬಿಡುತ್ತೇನೆ.

ಮೋದಿ, ಶಾ, ಹೈಕಮಾಂಡ್ ಎಲ್ಲರಿಗೂ ಏನು ಆಗಿದೆ ಎಂದು ಹೇಳುತ್ತೇನೆ. ನಾನು ಪಕ್ಷಕ್ಕೆ ನಿಷ್ಠೆಯಿಂದ ಇದ್ದೇನೆ, ಇಲ್ಲಿ ಸುಮ್ಮನಿದ್ದರೆ ಬೆಲೆಯೇ ಇಲ್ಲ . ಕೆಲಸ ಮಾಡಿದವರಿಗೆ ಬೆಲೆಯೇ ಇಲ್ಲ ಎಂದು ಶ್ರೀರಾಮುಲು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ರಾಧಾ ಮೋಹನ್ ದಾಸ್ ಆರೋಪದ ಬಗ್ಗೆ ಶ್ರೀರಾಮುಲು, ವಿಜಯೇಂದ್ರ ವಿರುದ್ಧವೂ ಸಹ ಮುಗಿಬಿದ್ದಿದ್ದಾರೆ. ನೀವು ರಾಜ್ಯಾಧ್ಯಕ್ಷರು ಜವಾಬ್ದಾರಿ ಸ್ಥಾನದಲ್ಲಿ ಇದ್ದೀರಿ. ನಾನು ನಿಮ್ಮ ತಂದೆ ಯಡಿಯೂರಪ್ಪನವರ ಜೊತೆ ಕೆಲಸ ಮಾಡಿದ್ದೇನೆ. ನಿಮಗೆ ನಾವು ಬೇಡವಾದ್ರೆ ಹೇಳಿ ಪಕ್ಷವನ್ನು ಬಿಡಲು ನಾವು ಸಿದ್ಧರಿದ್ದೇವೆ. ಸ್ವಾಭಿಮಾನಕ್ಕೆ ಧಕ್ಕೆ ತಂದರೇ ಸಮಾಜವನ್ನು ಅವಮಾನಿಸಿದ್ರೆ ನಾವು ಪಕ್ಷ ಬಿಡಲು ಸಿದ್ಧ ಎಂದು ವಿಜಯೇಂದ್ರಗೆ ಖಡಕ್ ಆಗಿ ಹೇಳಿದ್ದಾರೆ.

ಹೈಕಮಾಂಡ್​ಗೆ ಶ್ರೀರಾಮುಲು ದೂರುಇನ್ನು ಕೋರ್ ಕಮಿಟಿಯಲ್ಲಿನ ಬೆಳವಣಿಗೆ ಬಗ್ಗೆ ಶ್ರೀರಾಮುಲು ಹೈಕಮಾಂಡ್​ ನಾಯಕರಿಗೆ ದೂರವಾಣಿ ಕರೆ ಮಾಡಿ ದೂರು ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ಸಂಘ ಪರಿವಾರದ ಇಬ್ಬರು ಮುಖಂಡರಿಗೆ ಕರೆ ಮಾಡಿ ಕೋರ್ ಕಮಿಟಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ರಾಧಾಮೋಹನ್ ದಾಸ್ ಅಗರ್ವಾಲ್​ಗೆ ತಪ್ಪು ಮಾಹಿತಿ ನೀಡಲಾಗಿದೆ. ಶಾಸಕ ಜನಾರ್ದನರೆಡ್ಡಿ ಮಾತು ಕೇಳಿ ನನ್ನ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ನಿನ್ನೆ ನಡೆದ ಸಭೆಯಲ್ಲಿ ನನ್ನನ್ನು ಅವಮಾನ ಮಾಡಲಾಗಿದೆ. ಎಸ್​​ಟಿ ನಾಯಕತ್ವದ ಬಗ್ಗೆ ಸಭೆಯಲ್ಲಿ ಅವಮಾನ ಮಾಡಲಾಗಿದೆ. ಈ ರೀತಿಯ ಘಟನೆಗಳು ನಡೆದರೆ ಪಕ್ಷದಲ್ಲಿ ದುಡಿಯುವುದ ಕಷ್ಟ ಎಂದಿದ್ದಾರೆ.

ಪಕ್ಷ ಕಷ್ಟದಲ್ಲಿದ್ದ ಸಂದರ್ಭದಲ್ಲಿ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಎಲ್ಲರ ವಿರುದ್ಧ ಆಧಾರರಹಿತ ಮಾತನಾಡುವುದು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಂತೋಷ್ ಮುಂದೆ ಅಸಮಾಧಾನ ಹೊರಹಾಕಿದ್ದಾರೆ.ಈ ಎಲ್ಲಾ ಮಾತುಗಳನ್ನು ಕೇಳಿಸಿಕೊಂಡ ಬಿಎಸಲ್​ ಸಂತೋಷ್, ಶ್ರೀರಾಮುಲುರನ್ನು ಸಮಾಧಾನಪಡಿಸಿದ್ದಾರೆ.

ನಿಮ್ಮ ಹಾಗೂ ನಿಮ್ಮ ಸಾಮರ್ಥ್ಯದ ಬಗ್ಗೆ ಪಕ್ಷಕ್ಕೆ ಅರಿವಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಘಟನೆಗಳನ್ನು ಗಮನಿಸುತ್ತಿದ್ದೇವೆ. ರಾಜಕಾರಣದಲ್ಲಿ ಒಂದು ಮಾತು ಬರುತ್ತೆ ಒಂದು ಮಾತು ಹೋಗುತ್ತೆ. ಇದನ್ನು ಪಕ್ಕಕ್ಕೆ ಇಟ್ಟು ಪಕ್ಷ ಸಂಘಟನೆ ಬಗ್ಗೆ ಗಮನಹರಿಸಿ. ಹೈಕಮಾಂಡ್​ ಎಲ್ಲವನ್ನೂ ಬಗೆಹರಿಸುತ್ತೆ ಎಂದು ಶ್ರೀರಾಮುಲುಗೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮೊದಲೇ ಕಮಲ ಮನೆ ಕೊತ ಕೊತನೆ ಕುದಿಯುತ್ತಿದೆ. ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಪಕ್ಷದೊಳಗೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಇದರ ಮಧ್ಯೆ ಶ್ರೀರಾಮುಲು ಅವರ ಅಸಮಾಧಾನ ಪಕ್ಷದೊಳಗೆ ಸಂಚಲನ ಮೂಡಿಸಿದೆ.

ರೆಡ್ಡಿ ಸೇರ್ಪಡೆಗೆ ರಾಮುಲು ವಿರೋಧ
ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ರಾಮುಲು ಅಡ್ಡಗಾಲು ಹಾಕಿದ್ದರು ಎನ್ನುವ ಆರೋಪ ಇತ್ತು. ಅಲ್ಲಿಂದ ಜನಾರ್ದನ ರೆಡ್ಡಿ ಹಾಗೂ ರಾಮುಲು ನಡುವೆ ಮುನಿಸು ಆರಂಭಗೊಂಡಿತ್ತು. ಅದಾದ ಬಳಿಕ ಸವಾಲಾಗಿ ಸ್ವೀಕರಿಸಿ ಗಂಗಾವತಿಯಿಂದ ಹೊಸ ಪಕ್ಷ ಕಟ್ಟಿ ಸ್ಪರ್ಧೆಗಿಳಿದು, ಜನಾರ್ದನ ರೆಡ್ಡಿ ಗೆದ್ದಿದ್ದರು.

RELATED ARTICLES

Latest News