Friday, May 3, 2024
Homeರಾಜ್ಯವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ ವಿಜಯೇಂದ್ರ

ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ ವಿಜಯೇಂದ್ರ

ಬೆಂಗಳೂರು,ಫೆ.8- ಪ್ರಸ್ತುತ ಘೋಷಣೆಯಾಗಿರುವ ರಾಜ್ಯಸಭಾ ಚುನಾವಣೆ ಹಾಗೂ ಸದ್ಯದಲ್ಲೇ ಎದುರಾಗಲಿರುವ ವಿಧಾನಪರಿಷತ್ ಚುನಾವಣೆಯ ನಾಲ್ಕು ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದೆಹಲಿಗೆ ತೆರಳಿದ್ದಾರೆ.

ಫೆ.27ರಂದು ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಒಂದು ಸ್ಥಾನ ಖಚಿತವಾಗಿದೆ. ಆದರೆ ಅಭ್ಯರ್ಥಿ ಯಾರು ಎನ್ನುವ ವಿಚಾರ ನಿರ್ಧಾರವಾಗಿಲ್ಲ. ಹಾಲಿ ಸದಸ್ಯರಾಗಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತೊಂದು ಅವಗೆ ಮುಂದುವರೆಯುವ ಅಪೇಕ್ಷೆ ಹೊಂದಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಹಾಲಿ ಸದಸ್ಯರನ್ನೇ ಪುನರಾಯ್ಕೆ ಮಾಡಲು ಬಯಸಿದ್ದರೆ ಅಭ್ಯರ್ಥಿ ಹೆಸರು ಶಿಫಾರಸ್ಸು ಮಾಡುವುದು ಬೇಡ, ಹೊಸಬರಿಗೆ ಅವಕಾಶ ನೀಡುವ ನಿರ್ಧಾರ ಮಾಡಿದ್ದಲ್ಲಿ ಅಥವಾ ಎರಡನೇ ಅಭ್ಯರ್ಥಿ ಕಣಕ್ಕಿಳಿಸಲು ಸೂಚಿಸಿದಲ್ಲಿ ಮಾತ್ರ ಅಭ್ಯರ್ಥಿ ಹೆಸರು ಶಿಫಾರಸು ಮಾಡುವಂತೆ ಈಗಾಗಲೇ ರಾಜ್ಯ ಕೋರ್ ಕಮಿಟಿ ನಿರ್ಧರಿಸಿದೆ.

ರಾಜ್ಯಾದ್ಯಂತ ಹುಕ್ಕಾ ಬಳಕೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ

ಈ ವಿಷಯವನ್ನೂ ಪ್ರಸ್ತಾಪಿಸಿ ವಿಜಯೇಂದ್ರ ಚರ್ಚೆ ನಡೆಸಲಿದ್ದು, ಒಂದು ವೇಳೆ ಎರಡನೇ ಸ್ಥಾನ ಜೆಡಿಎಸ್‍ಗೆ ಕೊಡಬೇಕೆಂಬ ಚಿಂತನೆ ಇದ್ದರೆ, ಆ ಬಗ್ಗೆಯೂ ಚರ್ಚಿಸಿ ಹೈಕಮಾಂಡ್ ಅಭಿಪ್ರಾಯ ಪಡೆದುಕೊಳ್ಳಲಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಿಧಾನ ಪರಿಷತ್‍ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕೂ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಲೇ ಚರ್ಚಿಸಿ ನಿರ್ಧಾರಕ್ಕೆ ಬರಲು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಾಗುತ್ತದೆ.

ಬೆಂಗಳೂರು ಪದವೀಧರರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಇದರಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಈಗಾಗಲೇ ಉಪಚುನಾವಣೆ ಘೋಷಣೆಯಾಗಿದ್ದು, ಆ ಸ್ಥಾನವನ್ನು ಮಿತ್ರಪಕ್ಷ ಜೆಡಿಎಸ್‍ಗೆ ನೀಡಲಾಗಿದೆ. ಹಾಗಾಗಿ ಉಳಿದ ನಾಲ್ಕು ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ವಿಚಾರ ಹಾಗೂ ಮೈತ್ರಿ ಧರ್ಮಪಾಲನೆ ಕುರಿತು ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಿ.ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರ ಅವ 2024ರ ಜೂನ್ 21ಕ್ಕೆ ಕೊನೆ ಆಗಲಿದೆ.

ಜನತಾದರ್ಶನಕ್ಕೆ ಹರಿದುಬಂದ ಜನಸಾಗರ

ನೈರುತ್ಯ ಪದವೀಧರ ಕ್ಷೇತ್ರದ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದು, ಈ ಸ್ಥಾನದ ಅವ 2024ರ ಜೂನ್‍ರವರೆಗೆ ಇರುವ ಕಾರಣ ಉಪಚುನಾವಣೆ ಮಾಡುತ್ತಿಲ್ಲ. ಆದರೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸದಸ್ಯರಾಗಿದ್ದ ಪುಟ್ಟಣ್ಣ ಮಾರ್ಚ್ 16ರಂದು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನದ ಅವ 2026ರ ನವೆಂಬರ್ 11ರವರೆಗೆ ಇದೆ. ಹೀಗಾಗಿ ಉಪಚುನಾವಣೆ ನಡೆಸಲಾಗುತ್ತಿದೆ.

RELATED ARTICLES

Latest News