Thursday, May 2, 2024
Homeರಾಜ್ಯವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದ್ದೆ : ವಿಜಯೇಂದ್ರ

ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದ್ದೆ : ವಿಜಯೇಂದ್ರ

ಬೆಂಗಳೂರು,ಜ.7-ಕಾಂಗ್ರೆಸ್ ನಾಯಕರು ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ವರ್ತಿಸುತ್ತಿದ್ದಾರೆ. ಧರ್ಮ-ಧರ್ಮಗಳ ಹಾಗೂ ಸಮಾಜಗಳ ನಡುವೆ ವಿಷಬೀಜ ಬಿತ್ತುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಅಯೋಧ್ಯೆ ರಾಮಮಂದಿರದಲ್ಲಿ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಯುಕ್ತ ಮಂತ್ರಾಕ್ಷತೆ ವಿತರಿಸಿ ಜನಜಾಗೃತಿ ಮೂಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ದೇಶದಲ್ಲಿ ಎಲ್ಲರೂ ಒಂದು ಎಂಬ ಭಾವನೆ ಮೂಡುತ್ತಿದೆ. ಇಂತಹ ಶುಭ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಠೀಕರಣದ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಯತ್ನ ನಡೆಸುತ್ತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‍ಗೆ ತಾವು ಅಲ್ಪಸಂಖ್ಯಾತರ ಮತಗಳಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಭಾವನೆ ಇದೆ. ಇದಕ್ಕಾಗಿ ರೈತರೂ ಸೇರಿದಂತೆ ಎಲ್ಲಾ ವರ್ಗಗಳನ್ನೂ ಕಡೆಗಣಿಸುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುತ್ತೇವೆ ಎನ್ನುವುದರೊಂದಿಗೆ ಡಿಜೆ ಹಳ್ಳಿ/ಕೆಜೆ ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ದೇಶದ್ರೋಹಿಗಳನ್ನು ಅಮಾಯಕರು ಎಂದು ಬಿಂಬಿಸುವ ಪ್ರಯತ್ನಗಳಾಗುತ್ತಿವೆ ಎಂದು ಅವರು ದೂರಿದರು.

ಬಾಂಗ್ಲಾ ಸಾರ್ವತ್ರಿಕ ಚುನಾವಣೆ, ಬಿಗಿ ಭದ್ರತೆ ನಡುವೆ ಮತದಾನ

ಒಂದು ವೇಳೆ ಕೆಜೆ ಹಳ್ಳಿ/ಡಿಜೆ ಹಳ್ಳಿ ಪ್ರಕರಣದಲ್ಲಿನ ಆರೋಪಿಗಳನ್ನು ಬಿಡುಗಡೆ ಮಾಡಿದರೆ ಅದು ಇನ್ನಿತರ ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತದೆ. ಪೊಲೀಸ್ ಠಾಣೆಗಳಿಗೆ ಬೆಂಕಿ ಇಟ್ಟವರನ್ನು ಬಿಡುಗಡೆ ಮಾಡಿದ್ದಾರೆ ಎಂಬ ಧೋರಣೆಯಿಂದ ಇತರರು ಅದೇ ರೀತಿಯ ಕೃತ್ಯಗಳಲ್ಲಿ ತೊಡಗುವ ಆತಂಕವಿದೆ ಎಂದು ಹೇಳಿದರು.

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಅವರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರು ತ್ರಿಬ್ಬಲ್ ತಲಾಕ್ ನಿಷೇಧ ಜಾರಿಗೆ ತಂದಿದ್ದಾರೆ. ಆದರೆ ದುಷ್ಕøತ್ಯಗಳಲ್ಲಿ ಭಾಗಿಯಾದವರನ್ನು ರಕ್ಷಿಸುವುದು ಅಕ್ಷಮ್ಯ ಅಪರಾಧ ಎಂದರು.

ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ

ಕಾಂಗ್ರೆಸ್‍ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗು ಬಡಿಯಬೇಕು, ಸೊಕ್ಕು ಮುರಿಯಬೇಕು ಎಂದು ಅವರದೇ ಪಕ್ಷದ ಮಹಾನ್ ನಾಯಕರು ಯೋಜನೆ ರೂಪಿಸಿದ್ದಾರೆ. ಅದಕ್ಕಾಗಿ 3 ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಕುರಿತು ಚರ್ಚೆಗಳಾಗುತ್ತಿವೆ. ಅವರಿಗೆ ಯಶಸ್ಸು ದೊರೆಯಲಿ ಎಂದು ಹಾರೈಸಿದರು.

RELATED ARTICLES

Latest News