Friday, February 23, 2024
Homeರಾಜ್ಯಜನರ ದುಡ್ಡು, ಆಕಾಶದಲ್ಲಿ ಜಾತ್ರೆ : ಸುದ್ದು-ಜಮೀರ್ ಆಡಂಬರಕ್ಕೆ ವಿಜೆಯೇಂದ್ರ ಟೀಕೆ

ಜನರ ದುಡ್ಡು, ಆಕಾಶದಲ್ಲಿ ಜಾತ್ರೆ : ಸುದ್ದು-ಜಮೀರ್ ಆಡಂಬರಕ್ಕೆ ವಿಜೆಯೇಂದ್ರ ಟೀಕೆ

ಬೆಂಗಳೂರು,ಡಿ.22- ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೆಯೇಂದ್ರ ಅವರು ಆಡಳಿತರೂಡ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ವಾಗ್ದಳಿ ನಡೆಸಿದ್ದಾರೆ.

ತಮ್ಮ ಆಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಹ ಗಂಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ ಎಂದು ಕಿಡಿಕಾರಿದ್ದಾರೆ.

ಮುನಿಸಿಕೊಂಡಿರುವ ನಿತೀಶ್ ಜತೆ ರಾಹುಲ್ ಮಾತುಕತೆ

ಮುಖ್ಯಮಂತ್ರಿ ಮತ್ತಿತರರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ ರೋಮ್ ದೊರೆ ನೀರೋ ಉಲ್ಲೇಖಿಸುತ್ತಾ ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ ಎಂದು ವರ್ಣಿಸಬಹುದಾಗಿದೆ ಎಂದು ಹರಿಹಾಯ್ದಿದ್ದಾರೆ.

RELATED ARTICLES

Latest News