ಬಾಬುರಾವ್ ಚಿಂಚನಸೂರ್ ಪರಿಷತ್‍ಗೆ ಅವಿರೋಧವಾಗಿ ಆಯ್ಕೆ..?

Social Share

ಬೆಂಗಳೂರು, ಆ.4- ವಿಧಾನಸಭೆಯಿಂದ ವಿಧಾನ ಪರಿಷತ್‍ನ ಒಂದು ಸದಸ್ಯ ಸ್ಥಾನದ ಉಪಚುನಾವಣೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಸ್ಥಿರವಾಗಿದ್ದ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ ನಡೆಸಿತ್ತು.

ಆಡಳಿತಾರೂಢ ಬಿಜೆಪಿಯಿಂದ ಬಾಬುರಾವ್ ಚಿಂಚನಸೂರ್ ಮಾತ್ರ ಚುನಾವಣಾ ಕಣದಲ್ಲಿ ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜು.25 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಆ.1ರಂದು ಬಾಬುರಾವ್ ಚಿಂಚನಸೂರ್ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.

ನಾಮಪತ್ರ ವಾಪಸ್ ಪಡೆಯಲು ಇಂದು ಕಡೆ ದಿನವಾಗಿತ್ತು. ನಾಮಪತ್ರ ವಾಪಸ್ ಪಡೆಯುವ ಗಡುವು ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣಾಕಾರಿ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಪ್ರಕಟಿಸಿದ್ದಾರೆ.
ಈ ಉಪಚುನಾವಣೆಯಲ್ಲಿ ಚುನಾಯಿತರಾದ ಸದಸ್ಯರ ಅವಧಿ 2024ರ ಜೂ.17ರ ವರೆಗೆ ಇದೆ.

Articles You Might Like

Share This Article