Sunday, June 23, 2024
Homeರಾಜ್ಯಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್

ಬೆಂಗಳೂರು,ಅ.4- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿಯನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದ್ದಾರೆ. ವರದಿ ಸಲ್ಲಿಕೆಯಾದ ಬಳಿಕ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಹಿಂದೆ ಸದುದ್ದೇಶದಿಂದಲೇ ಸಮೀಕ್ಷೆ ನಡೆಸಿದೆ. ಸರ್ಕಾರದ ಹಣ ಫೋಲು ಮಾಡುವ ಸಲುವಾಗಿ ಯಾವುದೇ ಸರ್ಕಾರ ಸಮೀಕ್ಷೆ ಮಾಡುವುದಿಲ್ಲ ಎಂದರು.

ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಅನೇಕ ವರ್ಷಗಳಿಂದ ಬೇಡಿಕೆಗಳಿವೆ. ತಮಿಳುನಾಡಿನಲ್ಲಿ ಶೇ.69 ರಷ್ಟು ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ರಾಜ್ಯದಲ್ಲೂ ಮೀಸಲಾತಿ ಪರಿಷ್ಕರಣೆಗೆ ಬೇಡಿಕೆ ಕೇಳಿಬಂದಿದೆ. ಅನೇಕ ಸಮುದಾಯಗಳು ಮೀಸಲಾತಿ ವ್ಯಾಪ್ತಿಗೆ ಒಳಪಡಲು ಪ್ರಯತ್ನಿಸುತ್ತಿದೆ. ಇದೆಲ್ಲದಕ್ಕೂ ಸಮೀಕ್ಷಾ ವರದಿ ಅನುಕೂಲವಾಗಲಿದೆ. ಯಾವ ಸಮುದಾಯ ಎಷ್ಟು ಜನಸಂಖ್ಯೆ ಇದೆ ಎಂಬುದರ ಬಗ್ಗೆಯೂ ವಿಶ್ಲೇಷಣೆ ನಡೆಯಲಿದೆ ಎಂದರು.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಈ ಹಿಂದೆ ಕಾಂಗ್ರೆಸ್ ತನ್ನ ಚುನಾವಣಾ ಪ್ರನಾಳಿಕೆಯಲ್ಲಿ ಸಮೀಕ್ಷಾ ವರದಿಯನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ನಾವು ನಡೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ತಿಳಿಸಿದರು.

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಎಲ್ಲಾ ಕಾಲಘಟ್ಟದಲ್ಲೂ ಕ್ರಮ ವಹಿಸಲಾಗಿದೆ. ಹಿಂದಿನ ಸರ್ಕಾರದಲ್ಲಿ ಎಷ್ಟು ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂಬ ಮಾಹಿತಿ ತಮ್ಮ ಬಳಿ ಇದೆ. ಅಗತ್ಯ ಬಿದ್ದರೆ ಅದನ್ನು ಬಹಿರಂಗಪಡಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.

ಜನಸಾಮಾನ್ಯರು ಪ್ರಕರಣ ಹಿಂಪಡೆಯುವಂತೆ ಶಾಸಕರಿಗೆ, ಸಂಸದರಿಗೆ, ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸುವುದು ಸಹಜ. ಅಂತಹ ವೇಳೆ ಅವುಗಳು ಗೃಹ ಇಲಾಖೆಗೆ ರವಾನೆಯಾಗುತ್ತವೆ. ಈ ಅರ್ಜಿಗಳನ್ನು ಸಚಿವ ಸಂಪುಟದ ಉಪಸಮಿತಿಯ ಮುಂದೆ ಮಂಡಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಅವುಗಳನ್ನು ತೆಗೆಯಬಹುದಾ, ತೆಗೆಯಬಾರದ ಎಂಬೆಲ್ಲಾ ವಿಚಾರ ವಿನಿಮಯ ನಡೆಸಲಾಗುವುದು.

ಅಮಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದಾದರೆ ಅವುಗಳನ್ನು ಹಿಂಪಡೆಯುವಂತೆ ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಮಂಡಿಸಲಾಗುವುದು. ಸಂಪುಟದಲ್ಲೂ ಅದು ಚರ್ಚೆಯಾಗಲಿದೆ.

ಇಡಿ,ಐಟಿ ಅಧಿಕಾರಿಗಳು ಬೀದಿ ನಾಯಿ, ಬೆಕ್ಕುಗಳಂತೆ ತಿರುಗುತ್ತಿದ್ದಾರೆ ; ಬಘೇಲ್

ಉಪ ಸಮಿತಿಯ ವರದಿಯನ್ನು ಒಪ್ಪಲೇಬೇಕೆಂಬ ನಿಯಮವಿಲ್ಲ. ಸಂಪುಟದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರೆ ಅವು ವಾಪಸ್ ಬರಲಿವೆ. ಇಷ್ಟೆಲ್ಲಾ ಪ್ರಕ್ರಿಯೆಗಳಿರುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯವರಿಗೆ ಒಂದು ಪತ್ರ ಬರೆದರು ಎಂಬ ಕಾರಣಕ್ಕೆ ಬೊಬ್ಬೆ ಹೊಡೆಯುವುದು ಸರಿಯಲ್ಲ ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಚುನಾವಣೆಗೆ ಮೊದಲು ನಡೆದಿದೆ ಎಂದು ಹೇಳಲಾದ ಚಿಲುಮೆ ಹಗರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಈ ಹಿಂದೆ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಮತದಾರರ ಪಟ್ಟಿಯಲ್ಲಿ ಲೋಪಗಳಾಗಿವೆ ಎಂಬ ಶಂಕೆಯನ್ನು ವ್ಯಕ್ತಪಡಿಸಿ ಆರೋಪ ಮಾಡಿತ್ತು. ಅದರ ಕುರಿತು ಚುನಾವಣಾ ಆಯೋಗ ತನಿಖೆಗೆ ಆದೇಶಿಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ.

ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್ ಅದರಲ್ಲಿ ಭಾಗಿಯಾಗಿರುವ ಕುರಿತು ಮತ್ತು ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಣೆ ಮಾಡಿದ್ದರಿಂದಾಗಿಯೇ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಿನ್ನಡೆಯಾಗಿದೆ ಎಂಬ ಮಾಹಿತಿ ತಮಗಿಲ್ಲ ಎಂದು ಹೇಳಿದರು.

RELATED ARTICLES

Latest News