ಕೆಟ್ಟದಾಗಿ ಕಾಮೆಂಟ್ ಮಾಡಿದ ಯುವಕನ ಕೊಲೆ

Social Share

ಮೈಸೂರು,ಜು.13- ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ ಯುವಕನನ್ನು ಕೊಲೆ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದೆ. ಬೀರೇಶ (23) ಕೊಲೆಯಾಗಿದ್ದು, ನಿತಿನ್ ಮತ್ತು ಮನು ಕೊಲೆ ಆರೋಪಿ ಗಳಾಗಿದ್ದಾರೆ.

ಜಿಲ್ಲಾ ಹುಣಸೂರು ಪಟ್ಟಣದ ಸರಸ್ವತಿ ಪ್ಲಾಜ್ ಬಳಿ ಈ ಘಟನೆ ನಡೆದಿದೆ. ಬೈಕ್‍ನಲ್ಲಿ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ನಿತಿನ್ ಬಗ್ಗೆ ಬೀರೇಶ್ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಕೋಪಗೊಂಡು ಈ ಕೃತ್ಯ ಎಸಗಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿದ್ದ ಬೀರೇಶ್ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Articles You Might Like

Share This Article