ನಾಳೆ ತೆರೆಗೆ ಬರುತ್ತಿದೆ ಝೈದ್ ಖಾನ್ ಅಭಿನಯದ ಬನಾರಸ್ ಚಿತ್ರ

Social Share

ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದು ಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ.

ಬೇರೆ ರಾಜ್ಯಗಳ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದರೂ ಝೈದ್ ಖಾನ್ ಸೋನಲ್ ಜೊತೆಗೂಡಿ ವಾರಾಣಸಿಗೆ ತೆರಳಿ ಸ್ವತಃ ಗಂಗಾರತಿಯಲ್ಲಿ ಪಾಲ್ಗೊಂಡು ಗಂಗಾ ಮಾತೆಗೆ ನಮಿಸಿದ್ದಾರೆ.ಝೈದ್ ಖಾನ್ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಬಿಡುವಿರದೆ ಸುತ್ತಿದ್ದಾರೆ.

ಎಲ್ಲವೂ ಸಾರ್ಥಕ್ಯ ಕಾಣುವಂತೆ ಮಾಡಲು ಶ್ರಮಿಸುತ್ತಿದ್ದಾರೆ. ಗಮನೀಯ ಅಂಶವೆಂದರೆ, ಈ ಹಾದಿಯಲ್ಲಿ ಸಿಗುವ ಧಾರ್ಮಿಕ ಕ್ಷೇತ್ರಗಳಿಗೆಲ್ಲ ಝೈದ್ ಜಾತಿ ಮತಗಳ ಹಂಗಿಲ್ಲದೆ ಭೇಟಿ ನೀಡಿ ಭಕ್ತಿಯಿಂದ ನಮಿಸಿದ್ದಾರೆ.ವಿವಿಧಾನಗಳಿಗೆ ತಕ್ಕುದಾಗಿ ಅದರಲ್ಲಿ ಪಾಲ್ಗೊಂಡು ಭಕ್ತಿ-ಭಾವದಲ್ಲಿ ಮಿಂದೆದ್ದಿದ್ದಾರೆ.

ಇದು ಘನಘೋರ : ಸಕಾಲದಲ್ಲಿ ಚಿಕಿತ್ಸೆ ಸಿಗದೇ ತಾಯಿ ಮತ್ತು ಅವಳಿ ನವಜಾತ ಶಿಶುಗಳ ಸಾವು

ಅದಾದ ನಂತರದಲ್ಲಿ ವಾರಾಣಸಿಯಲ್ಲಿ ನಡೆಯುತ್ತಿರುವ ಪ್ರಪ್ರಥಮ ಮಣಿಕರ್ಣಿಕಾ ಫಿಲಂ ಫೆಸ್ಟಿವಲ್ನಲ್ಲಿಯೂ ಬನಾರಸ್ ಜೋಡಿ ಭಾಗಿಯಾಗಿದೆ. ಆ ಕಾರ್ಯಕ್ರಮವನ್ನು ಬಾಲಿವುಡ್ನ ಹಿರಿಯ ನಟ ಸಂಜಯ್ ಮಿಶ್ರಾ ಉದ್ಘಾಟಿಸಿದ್ದಾರೆ. ಬಳಿಕ ಬಲು ಪ್ರೀತಿಯಿಂದ ಅವರೇ ಖುದ್ದಾಗಿ ಬನಾರಸ್ ಜೋಡಿಯನ್ನು ಸನ್ಮಾನಿಸಿದ್ದಾರೆ. ಒಟ್ಟಾರೆ ಚಿತ್ರದ ಬಗ್ಗೆ ಒಳ್ಳೆ ಮಾತುಗಳನ್ನಾಡಿ, ಗೆಲುವಾಗಲೆಂದು ಹಾರೈಸಿದ್ದಾರೆ.

ಇದು ನಿಜಕ್ಕೂ ನಾಯಕ ನಟ ಝೈದ್ ಖಾನ್ ಪಾಲಿಗೆ ಸ್ಮರಣೀಯ ಅನುಭವ. ಏಕೆಂದರೆ, ಪ್ರಚಾರದ ಹಾದಿಯಲ್ಲಿ ಎಲ್ಲ ಒಳಿತುಗಳೂ ತಾನೇತಾನಾಗಿ ಅವರನ್ನು ಅರಸಿಕೊಂಡು ಬರುತ್ತಿವೆ. ಯಾವ ವಿರೋಧಾಭಾಸ, ಟೀಕೆ-ಟಿಪ್ಪಣಿಗಳಿಗೂ ತಲೆಕೆಡಿಸಿಕೊಳ್ಳದೆ, ನಾನಿರೋದೇ ಹೀಗೆಂಬಂಥಾ ಮನಃಸ್ಥಿತಿಯಿಂದ ಮುಂದುವರೆಯುತ್ತಿರುವ ಝೈದ್ ಎಲ್ಲರಿಗೂ ಹಿಡಿಸಿದ್ದಾರೆ.

ಜಾತಿ ಮತಗಳಾಚೆಗೆ ಈ ಹುಡುಗ ನಮಮ್ಮವನೆಂಬಂಥಾ ಬೆಚ್ಚಗಿನ ಭಾವವನ್ನು ಎಲ್ಲರೊಳಗೂ ಬೇರೂರಿಸುತ್ತಿದ್ದಾರೆ. ಇದುವೇ ಅಮೋಘ ಗೆಲುವಾಗಿ ಅವರ ಕೈಹಿಡಿಯೋದರಲ್ಲಿ ಯಾವ ಸಂದೇಹವೂ ಇಲ್ಲ.

ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ಬನಾರಸ್ ಹೀರೋ:

ಕರ್ನಾಟಕದ ಬಹುಭಾಗಗಳಲ್ಲಿ ಯಶಸ್ವಿಯಾಗಿ ರೋಡ್ ಶೋಗಳನ್ನು ನಡೆಸಿದ್ದ ಬನಾರಸ್ ಹೀರೋ ಝೈದ್ ಖಾನ್ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ.

ವಿಶೇಷವೆಂದರೆ, ಸದಾ ಭಾಷೆ ಮತ್ತು ಗಡಿ ವಿವಾದದಿಂದ ಸದ್ದು ಮಾಡುವ ಬೆಳಗಾವಿಯ ನೆಲದಲ್ಲಿಯೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ. 67ನೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಯೂ ಬನಾರಸ್ ಹೀರೋ ಝೈದ್ ಖಾನ್ ಅವರಿಗೆ ಗೌರವ ಲಭಿಸಿತ್ತು.

ಆ ಕಾರ್ಯಕ್ರಮದ ವೇದಿಕೆಗೆ ಝೈದ್ರನ್ನು ಪ್ರೀತಿಯಿಂದ ಬರಮಾಡಿಕೊಂಡು ಸನ್ಮಾನಿಸಲಾಯಿತು. ಅದಾದ ಬಳಿಕ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯ ಕನ್ನಡ ಪರ ಸಂಘಟನೆಗಳು ಬೃಹತ್ ಪಾದಯಾತ್ರೆಯನ್ನು ಆರಂಭಿಸಿದ್ದವು. ಅದರಲ್ಲಿಯೂ ಝೈದ್ ಖಾನ್ ಉತ್ಸಾಹದಿಂದ ಹೆಜ್ಜೆ ಹಾಕಿದರು.

ಚಿತ್ರವನ್ನು ಎಷ್ಟು ಅದ್ಧೂರಿತನದಿಂದ ಮೆರೆಸಿದ್ದಾರೋ ಅಷ್ಟೇ ಅದ್ದೂರಿ ತನದಿಂದ ಪ್ರಚಾರ ಕಾರ್ಯದಲ್ಲೂ ತಂಡ ತೊಡಗಿಸಿಕೊಂಡಿತ್ತು . ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಈಗಾಗಲೇ ಹಾಡುಗಳು ಮತ್ತು ಟ್ರೇಲರ್ನಿಂದ ಭಾರೀ ಜನಮೆಚ್ಚುಗೆ ಪಡೆದಿದೆ. ಸಿನಿಮಾ ಗೆಲುವಿನ ಸೂಚನೆಗಳನ್ನು ಕೊಟ್ಟಿವೆ ಕೂಡ.

Articles You Might Like

Share This Article