Thursday, November 30, 2023
Homeಬೆಂಗಳೂರು"ಬೆಂಗಳೂರಲ್ಲಿ ಬಂದ್ ಸಂಪೂರ್ಣ ಶಾಂತಿಯುತವಾಗಿದೆ"

“ಬೆಂಗಳೂರಲ್ಲಿ ಬಂದ್ ಸಂಪೂರ್ಣ ಶಾಂತಿಯುತವಾಗಿದೆ”

ಬೆಂಗಳೂರು, ಸೆ.29- ನಗರದಲ್ಲಿ ಬಂದ್ ಸಂಪೂರ್ಣ ಶಾಂತಿಯುತವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ತಿಳಿಸಿದರು. ಈ ಸಂಜೆ ಯೊಂದಿಗೆ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮವಾಗಿ ಕನ್ನಡ ಪರ ಸಂಘಟನೆಗಳ ಕೆಲವು ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಗಸ್ತಿನಲ್ಲಿದ್ದಾರೆ, ಇದುವರೆಗೂ ಯಾವುದೇ ರೀತಿಯ ಸಣ್ಣ ಪುಟ್ಟ ಘಟನೆಗಳೂ ನಡೆದಿಲ್ಲ, ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಟೌನ್ ಹಾಲ್ ಮುಂಭಾಗ ರ್ಯಾಲಿ ನಡೆಸಲು ಮುಂದಾದ ವಾಟಾಳ್ ನಾಗರಾಜ್, ಸಾರಾ ಗೋವಿಂದು ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದು ಫ್ರೀಡಂ ಪಾರ್ಕ್ಗೆ ಕರೆದೊಯ್ದಿದ್ದಾರೆ ಎಂದರು. ನಗರದಾದ್ಯಂತ ರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ಆಯುಕ್ತರು ತಿಳಿಸಿದರು.

RELATED ARTICLES

Latest News