ಅಗರಬತ್ತಿ ಉದ್ಯಮಕ್ಕೆ ಪೂರಕ ಸಹಕಾರ : ಸಿಎಂ ಬೊಮ್ಮಾಯಿ

Social Share

ಬೆಂಗಳೂರು, ನ.24- ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಇಂದು ಆಯೋಜಿಸಿದ್ದ ಐಮಾ ಎಕ್ಸ್‍ಪೋ- 2022 ಉದ್ಘಾಟಿಸಿ ಮಾತನಾಡಿದ ಅವರು, ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಈ ಉದ್ಯಮ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ರಾಜ್ಯ ಸರ್ಕಾರವು ಸಣ್ಣ ಪುಟ್ಟ ಸಮುದಾಯಗಳಾದ ಕುಂಬಾರ ಕಮ್ಮಾರ, ಚಮ್ಮಾರ ಸೇರಿದಂತೆ ಇತರ ಸಮುದಾಯಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಆರ್ಥಿಕತೆ ಕೆಳ ಸ್ಥರದಿಂದ ಬಲಗೊಳ್ಳುತ್ತದೆ ಎಂದು ಹೇಳಿದರು.

ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ ಮಾಡುತ್ತಿದೆ. 250 ವರ್ಷಗಳಿಂದ ಪರಿಮಳದ ಜೊತೆಗೆ ಸಂತೋಷ ಹರಡುತ್ತಿದ್ದೀರಿ. ಯಾವುದೇ ಉದ್ಯಮ ಈ ರೀತಿ ಇಲ್ಲ. ಸಣ್ಣ ಸಣ್ಣ ಸಂತೋಷಗಳು ದೊಡ್ಡ ಸಂಭ್ರಮ ನೀಡುತ್ತಿವೆ ಎಂದು ಅಭಿಪ್ರಾಯಪಟ್ಟರು.

ವೋಟರ್ ಐಡಿ ಹಗರಣ: ರಾಜಕಾರಣಿಗಳ ಸಂಪರ್ಕದ ಬಗ್ಗೆ ಬಾಯಿ ಬಿಡದ `ಚಿಲುಮೆ’ ರವಿ

ಅಗರಬತ್ತಿ ಉದ್ಯಮಮಕ್ಕೆ ದೊಡ್ಡ ಇತಿಹಾಸವಿದೆ. ಇದೊಂದು ದೊಡ್ಡ ವಿಜ್ಞಾನ. ಪಶ್ಚಿಮಾತ್ಯ ದೇಶಗಳಲ್ಲಿ ಕೃತಕ ಪರಿಮಳ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಭಾರತ ಜೀವ ವೈವಿಧ್ಯವಿರುವ ದೇಶ. ಪ್ರಾಕೃತಿಕವಾಗಿಯೇ ಪರಿಮಳ ಬೀರುವ ಉತ್ಪನ್ನಗಳು ಇಲ್ಲಿ ದೊರೆಯುತ್ತಿವೆ. ನನ್ನ ಕ್ಷೇತ್ರದಲ್ಲಿಯೂ ಒಬ್ಬರು ಸುಮಾರು 2000 ಎಕರೆ ಪ್ರದೇಶದಲ್ಲಿ ಪುಷ್ಪ ಕೃಷಿ ಮಾಡುತ್ತಿದ್ದಾರೆ ಎಂದರು.

ನಮ್ಮ ಸರ್ಕಾರ ಮಹಿಳೆಯರಿಗೆ ಸ್ತ್ರೀ ಸಾಮಥ್ರ್ಯ ಯೋಜನೆ ಜಾರಿಗೆ ತಂದಿದೆ ಅವರಿಗೆ 1.5 ಲಕ್ಷ ಸರ್ಕಾರ ನೀಡುತ್ತದೆ. 5 ಲಕ್ಷದವರೆಗೆ ಅನುದಾನ ನೀಡಲಾಗುತ್ತಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೊಗ ಕಲ್ಪಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

ವಾರ್ಡ್ ಪುನರ್ ವಿಂಗಡಣೆ ತಕರಾರು: ಬಿಬಿಎಂಪಿಗೆ ನೋಟೀಸ್..

ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಾರೆ. ಅವರು ಉತ್ಪಾದನೆಯಲ್ಲಿ ತೊಡಗಿದರೆ ಕುಟುಂಬದಲ್ಲಿ ಹೆಚ್ಚಿನ ಉಳಿತಾಯವಾಗಲಿದೆ. ಮಹಿಳೆಯರು ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು ಎಂದು ಸಲಹೆ ಮಾಡಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಮಾ ಅಧ್ಯಕ್ಷ ಅರ್ಜುನ್ ರಂಗಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಡಿಜಿಟಲ್ ಮಾಧ್ಯಮಕ್ಕೆ ಬೀಳಲಿದೆ ಕಡಿವಾಣ

Bangalore, Agarbatti, mega, fair, Palace Ground, CM Bommai,

Articles You Might Like

Share This Article