Sunday, April 14, 2024
Homeಬೆಂಗಳೂರುಮತದಾರರ ಜಾಗೃತಿಗಾಗಿ ನಮ್ಮ ಬೆಂಗಳೂರು ರಾಯಭಾರಿಗಳ ನಿಯೋಜನೆ

ಮತದಾರರ ಜಾಗೃತಿಗಾಗಿ ನಮ್ಮ ಬೆಂಗಳೂರು ರಾಯಭಾರಿಗಳ ನಿಯೋಜನೆ

ಬೆಂಗಳೂರು, ಏ.2- `ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಿರಿಯ ನಟ ರಮೇಶ್ ಅರವಿಂದ್ ಸೇರಿದಂತೆ ನಾಲ್ವರು ಪ್ರಮುಖ ವ್ಯಕ್ತಿಗಳನ್ನು ನಮ್ಮ ಬೆಂಗಳೂರು ಐಕಾನ್ಸ್ (ರಾಯಭಾರಿ) ಗಳಾಗಿ ನಿಯೋಜನೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಚುನಾವಣಾಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ನಮ್ಮ ಬೆಂಗಳೂರು ಐಕಾನ್ಸ್ ಕಾರ್ಯಕ್ರಮಕ್ಕೆ ಟೌನ್ಹಾಲ್ ನಲ್ಲಿ ಚಾಲನೆ ನೀಡಿದ ಮಾತನಾಡಿದ ಅವರು, `ಮತದಾನ ಮಾಡುವ ಸಲುವಾಗಿ ನಗರದ ಜನತೆಗೆ ಹುಮ್ಮಸ್ಸು ತುಂಬಿಸುವ ಸಲುವಾಗಿ ಹಾಗೂ ಚುನಾವಣಾ ಹಬ್ಬಕ್ಕಾಗಿ ನಟಿ ಹಾಗೂ ರೂಪದರ್ಶಿ ನೀತು ವನಜಾಕ್ಷಿ, ಬ್ಯಾಡ್ಮಿಂಟನ್ ಆಟಗಾರಅನುಪ್ ಶ್ರೀಧರ್, ಟೇಬಲ್ ಟೆನ್ನಿಸ್ ಆಟಗಾರ್ತಿ ಅರ್ಚನಾ ಜಿ ಕಾಮತ್ ಅವರು ನಮ್ಮ ಜೊತೆ ಕೈಜೋಡಿಸಿ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ ‘ ಎಂದು ಹೇಳಿದರು.

`ಮೊದಲ ಬಾರಿ ಚುನಾವಣೆ ಯಲ್ಲಿ ಮತ ಚಲಾಯಿಸು ತ್ತಿರುವವರಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ತಪ್ಪದೆ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಮುಂದೆ ಬಂದು ಎಲ್ಲರಿಗೂ ಮತದಾಮ ಮಾಡಲು ಪ್ರೇರೇಪಿಸಿ ಮತದಾನ ಮಾಡಬೇಕು’ ಎಂದು ತಿಳಿಸಿದರು.ಮತ ಚಲಾಯಿಸುವುದು ಎಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ.

ಮತಗಟ್ಟೆಗಳ ಬಳಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿರುತ್ತದೆ. ನಿಮಗೆ ಮತ ಚಲಾಯಿಸಲು ಇಷ್ಟವಿಲ್ಲದಿದ್ದರೆ ನೋಟ ಮಾಡಲು ಕೂಡಾ ಅವಕಾಶವಿದ್ದು, ಎಲ್ಲರೂ ಮತ ಚಲಾಯಿಸಲು ಮನವಿ ಮಾಡಿದರು.ನಟ ರಮೇಶ್ ಅರವಿಂದ್ ಮಾತನಾಡಿ, ಏಪ್ರಿಲ್ 26 ರಂದು ಚುನಾವಣಾ ಹಬ್ಬವಿದ್ದು, ಎಲ್ಲರೂ ಸಡಗರದಿಂದ ಒಟ್ಟಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡೋಣ. ಒಂದು ಮತದಿಂದ ಎಲ್ಲವನ್ನೂ ಬದಲಿಸುವ ಶಕ್ತಿಯಿದೆ.ಆದ್ದರಿಂದ ಎಲ್ಲರೂ ತಪ್ಪದೆ ಮತದಾನ ಮಾಡಲು ತಿಳಿಸಿದರು.

`ಚುನಾವಣಾ ವ್ಯವಸ್ಥೆಯಲ್ಲಿ ನಾವು ಮತದಾನ ಮಾಡಿದರೆ ಏನೂ ಬದಲಾಗೋದಿಲ್ಲ ಎಂಬ ಮನೋಭಾವಿದ್ದರೆ ಅದನ್ನು ಮೊದಲು ತಲೆಯಿಂದ ತೆಗೆಯಿರಿ. ಜವಾಬ್ದಾರಿಯಿಂದ ಎಲ್ಲರೂ ಒಂದಾಗಿ ಮತದಾನ ಮಾಡಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಉತ್ತಮ ಸಮಾಜವನ್ನು ರೂಪಿಸಿ’ ಎಂದು ಪ್ರೇರೇಪಿಸಿದರು.

ಅನುಪ್ ಶ್ರೀಧರ್ ಮಾತನಾಡಿ, `ಎಲ್ಲರೂ ತಪ್ಪದೆ ಮತದಾನ ಮಾಡುವುದು ನಮ್ಮೆಲ್ಲ ಕರ್ತವ್ಯ, ನಾವು ಮತದಾನ ಮಾಡಿಲ್ಲವಾದಲ್ಲಿ ನಾವು ಪ್ರಶ್ನೆ ಮಾಡಲು ಅರ್ಹರಿರುವುದಿಲ್ಲ. ಆದ್ದರಿಂದ ನಾವೆಲ್ಲರೂ ತಪ್ಪದೆ ಮತದಾನ ಮಾಡೋಣ ‘ ಎಂದು ಹೇಳಿದರು.

ನಟಿ ಹಾಗೂ ರೂಪದರ್ಶಿ ನೀತು ವನಜಾಕ್ಷಿ ಮಾತನಾಡಿ, `ನಮ್ಮ ನಾಯಕರನ್ನು ನಾವು ಆಯ್ಕೆ ಮಾಡಬೇಕು. ಆದ ಕಾರಣ ಎಲ್ಲರೂ ತಮ್ಮ ಸ್ವಇಚ್ಛೆಯಿಂದ ಮುಂದೆ ಬಂದು ತಪ್ಪದೆ ಮತ ಚಲಾಯಿಸಬೇಕು’ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಕಾಂತರಾಜ್, ವಿಶೇಷ ಆಯುಕ್ತರಾದ ಸುರೋಲ್ಕರ್, ವಿಕಾಸ್ ಕಿಶೋರ್, ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ವಿದ್ಯಾರ್ಥಿಗಳು , ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Latest News