ಎಚ್‍ಡಿಕೆಗೆ ಬೆಂಗಳೂರು ನಗರ ಜೆಡಿಎಸ್ ಉಸ್ತುವಾರಿ ಹೊಣೆ

Social Share

ಬೆಂಗಳೂರು,ಜು.31- ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರದ ಜೆಡಿಎಸ್ ಉಸ್ತುವಾರಿಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ವಹಿಸಿಕೊಳ್ಳಲು ಮುಂದಾಗಿದ್ದಾರೆ. ಬೆಂಗಳೂರು ನಗರ ಘಟಕವನ್ನು ಪುನಾರಚನೆ ಮಾಡಲು ಉದ್ದೇಶಿಸಲಾಗಿದ್ದು, ಅದಕ್ಕೆ ಪೂರಕ ಸಿದ್ದತೆಗಳು ನಡೆಯುತ್ತಿವೆ. ಕುಮಾರಸ್ವಾಮಿ ಅವರ ಉಸ್ತುವಾರಿಯಲ್ಲಿ ಐದು ವಿಭಾಗಗಳನ್ನು ಮಾಡಿ ಪ್ರತಿ ವಿಭಾಗಕ್ಕೂ ಒಬ್ಬ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ.
ಪಕ್ಷದ ಸಂಘಟನೆ, ಜನಪ್ರಿಯತೆ ಸೇರಿದಂತೆ ಎಲ್ಲ ರೀತಿಯಲ್ಲೂ ಸಾಮಥ್ರ್ಯ ಹೊಂದಿರುವಂತವರನ್ನು ವಿಭಾಗ ಅಧ್ಯಕ್ಷರನ್ನಾಗಿ ನೇಮಕ ಮಾಡ  ಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿಭಾಗೀಯ ಅಧ್ಯಕ್ಷರ ಅೀನದಲ್ಲಿ ಕ್ಷೇತ್ರ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ. ವಾರ್ಡ್‍ಗೊಬ್ಬ ಅಧ್ಯಕ್ಷರನ್ನು ನೇಮಕ ಮಾಡುವುದಲ್ಲದೆ ಬೂತ್ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗುತ್ತದೆ.
ಆ ಮೂಲಕ ಬೆಂಗಳೂರು ನಗರದಲ್ಲಿ ತಳಮಟ್ಟದಿಂದ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಲಾಗುತ್ತದೆ. ಸದ್ಯದಲ್ಲೇ ಎದುರಾಗಲಿರುವ ಬಿಬಿಎಂಪಿ ಚುನಾವಣೆಯಲ್ಲಿ ಹೆಚ್ಚು ಸ್ಥಾನದಲ್ಲಿ ಗೆಲುವು ಸಾಧಿಸುವ ಕಾರ್ಯತಂತ್ರಗಳ ಬಗ್ಗೆ ಕುಮಾರಸ್ವಾಮಿ ಮಾರ್ಗದರ್ಶನ ಮಾಡಲಿದ್ದಾರೆ.
ಅಲ್ಲದೆ 28 ವಿಧಾನಸಭಾ ಕ್ಷೇತ್ರಗಳು ಬೆಂಗಳೂರಿನಲ್ಲೇ ಇರುವುದರಿಂದ 2023ಕ್ಕೆ ನಡೆಯುವ ವಿಧಾನಸಭೆ ಚುನಾವಣೆಗೂ ಅಭ್ಯರ್ಥಿ ಆಯ್ಕೆ ಸೇರಿದಂತೆ ಸಿದ್ದತೆಯನ್ನು ಈಗಿನಿಂದಲೇ ಆರಂಭಿಸುವ ಉದ್ದೇಶದಿಂದ ಬೆಂಗಳೂರು ನಗರ ಘಟಕವನ್ನು ಪುನರ್ ರಚನೆ ಮಾಡಲಾಗುತ್ತಿದೆ.
ಕಳೆದ ಎರಡು ವರ್ಷಗಳಿಂದ ಕೋವಿಡ್‍ನಿಂದಾಗಿ ಪಕ್ಷದ ಕಾರ್ಯಕ್ರಮಗಳು ಅಷ್ಟಾಗಿ ನಗರದಲ್ಲಿ ನಡೆದಿಲ್ಲ. ಪಕ್ಷ ಅಕಾರದಲ್ಲಿದ್ದ ಅವಯಲ್ಲಿ ಬೆಂಗಳೂರು ಅಭಿವೃದ್ಧಿಗೆ ಮಾಡಿರುವ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಮಾಡಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Articles You Might Like

Share This Article