Monday, March 10, 2025
Homeರಾಜ್ಯಮನಮೋಹನ್‌ಸಿಂಗ್‌ ವಿವಿಯಾಗಲಿದೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯ

ಮನಮೋಹನ್‌ಸಿಂಗ್‌ ವಿವಿಯಾಗಲಿದೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯ

Bangalore City University to become Manmohan Singh University

ಬೆಂಗಳೂರು ನಗರ ವಿಶ್ವವಿದ್ಯಾನಿಲಯವನ್ನು ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ತಮ ಬಜೆಟ್‌ ಭಾಷಣದಲ್ಲಿ ಅವರು ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ ಮನಮೋಹನ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

RELATED ARTICLES

Latest News