ಬೆಂಗಳೂರು, ಜ.7- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರ ಜತೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ನಗರದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ದ್ವಿಗುಣಗೊಂಡಿದೆ. ಡಿ.29ರಂದು 33 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರೆ, ನಿನ್ನೆ 124 ಸೋಂಕಿತರು ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊರೊನಾ ಮತ್ತು ಓಮಿಕ್ರಾನ್ ಸಂಖ್ಯೆ ಹೆಚ್ಚಳವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.
ಸಣ್ಣ ಸಣ್ಣ ಲಕ್ಷಣಗಳು ಕಂಡುಬಂದರೂ ಆಸ್ಪತ್ರೆಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ನೆಗಡಿ, ಕೆಮ್ಮು, ಜ್ವರ ಎಂದು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಶೇ.20ರಷ್ಟು ಏರಿಕೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯ 18,913 ಸಕ್ರಿಯ ಪ್ರಕರಣಗಳಿವೆ.
ಇದರ ಜತೆಗೆ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವೂ ಏರಿಕೆಯಾಗುತ್ತಿರುವುದು ಸಹಜವಾಗಿಯೇ ಆತಂಕ ಸೃಷ್ಟಿಸಿದೆ. ಸದ್ಯ ಸಾಮಾನ್ಯ ವಾರ್ಡ್ಗಳಲ್ಲಿ 56 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 58 ಜನ ಎಚ್ಡಿಯು ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐದು ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಐದು ಮಂದಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೊನಾ ಸೋಟದಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ತಪಾಸಣೆಯನ್ನು ತೀವ್ರಗೊಳಿಸಿದೆ. ಸಿಟಿ ರೈಲು ಪ್ರಯಾಣಿಕರಿಗೆ ಕೊರೊನಾ ಟೆಸ್ಟಿಂಗ್ಅನ್ನು ಹೆಚ್ಚು ಮಾಡುತ್ತಿದೆ. ರೈಲು ನಿಲ್ದಾಣದಲ್ಲಿ ಬೀಡುಬಿಟ್ಟಿರುವ ಆರೋಗ್ಯ ಸಿಬ್ಬಂದಿ ಕೊರೊನಾ ಪರೀಕ್ಷೆ ಮಾಡುತ್ತಿದ್ದಾರೆ. ಮಾಸ್ಕ್ ಹಾಕದವರಿಗೆ ಮಾರ್ಷಲ್ಗಳು ದಂಡ ವಿಸುವುದನ್ನು ತೀವ್ರಗೊಳಿಸಿದ್ದಾರೆ. ಮಾರ್ಗಸೂಚಿಗಳನ್ನು ಪಾಲಿಸದ ಜನರ ಮೇಲೆ ಬಿಬಿಎಂಪಿ ಹದ್ದಿನ ಕಣ್ಣಿಟ್ಟಿದೆ.
