ಬೆಂಗಳೂರು,ಜು.16- ಸ್ಕೂಟರ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಕಂಪನಿ ಮಹಿಳಾ ಉದ್ಯೋಗಿ ಮೃತಪಟ್ಟಿರುವ ಘಟನೆ ಸಂಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಮತ್ತೀಕೆರೆಯ ಬಿ.ಕೆ.ನಗರ ನಿವಾಸಿ ಆಯಿಷಾಖಾನಂ (30) ಮೃತಪಟ್ಟ ಉದ್ಯೋಗಿ.
ಯಲಹಂಕದ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ ಆಯಿಷಾ ಅವರು ರಾತ್ರಿ 9 ಗಂಟೆ ಸಮಯದಲ್ಲಿ ಕೆಲಸ ಮುಗಿಸಿಕೊಂಡು ತಮ ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ರಿಂಗ್ ರಸ್ತೆಯ ಭದ್ರಪ್ಪ ಲೇ ಔಟ್ ಬಸ್ ನಿಲ್ದಾಣ ಸಮೀಪದ ರಿಲಯನ್‌್ಸ ಮಾರ್ಟ್ ಬಳಿ ಅತೀವೇಗ, ಅಜಾಗರೂಕತೆಯಿಂದ ಬಂದ ಸಿಮೆಂಟ್ ಮಿಕ್ಸರ್ ಲಾರಿ ಇವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗುರುಳಿದ ಆಯಿಷಾಖಾನಂರವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಸಂಜಯನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ನಂತರ ಲಾರಿ ಚಾಲಕ ಒರಿಸ್ಸಾ ಮೂಲದ ದಿಲೀಪ್‌ಕುಮಾರ್ (55) ಎಂಬಾತನನ್ನು ಬಂಧಿಸಿದ್ದಾರೆ.
ಆರೊಪಿ ದಿಲೀಪ್‌ಕುಮಾರ್‌ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿ ಅಪಘಾತವೆಸಗಿರುವುದು ಗೊತ್ತಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
- ರೌಡಿ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
- ನೈರುತ್ಯ ವಿಭಾಗದ ಡಿಸಿಪಿ ಕಚೇರಿ ಕಾರ್ಯಾರಂಭ
- ವೈಭವದಿಂದ ಜರುಗಿದ ಚಾಮುಂಡೇಶ್ವರಿ ವರ್ಧಂತಿ ಉತ್ಸವ
- ಕೊಡಗು, ಉತ್ತರ ಕನ್ನಡದಲ್ಲಿ ಮಳೆ ಅಬ್ಬರ, ಶಾಲೆಗಳಿಗೆ ರಜೆ
- ಛತ್ತೀಸ್ಗಡ : ಹೈಟೆಕ್ ಸಾಧನಗಳನ್ನು ಬಳಸಿ ಸರ್ಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಕಲು