ಬೆಂಗಳೂರಿನ ಆಸ್ಪತ್ರೆ ಹಾಗೂ ಲ್ಯಾಬ್‍ಗಳ ಮೇಲೆ ಐಟಿ ದಾಳಿ

Social Share

ಬೆಂಗಳೂರು,ನ.16- ಆದಾಯ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಆಸ್ಪತ್ರೆ ಲ್ಯಾಬ್ ಮತ್ತು ಡಯಾಗ್ನಸ್ಟಿಕ್ ಸೆಂಟರ್ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಮತ್ತಿತರ ಕಡೆ ಮುಂಬೈನಿಂದ ಆಗಮಿಸಿದ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಏಳು ಇನೋವಾ ಕಾರುಗಳಲ್ಲಿ ಬಂದ ಐಟಿ ಅಧಿಕಾರಿಗಳು, ಮುಂಜಾನೆ 4 ಗಂಟೆಗೆ ಸಿಆರ್ಪಿಎಫ್ ಭದ್ರತೆ ನಡುವೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಆರ್ವಿ ಮೆಟ್ರೊ ಪೊಲೀಸ್ ಲ್ಯಾಬ್ ಮೇಲೆ ವಂಚನೆಗೆ ಸಂಬಂಧಿಸಿದಂತೆ ಲ್ಯಾಬ್ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ರೋಗಿಗಳ ವಿವರವನ್ನು ನೀಡದೆ ಸುಳ್ಳು ಮಾಹಿತಿ ನೀಡಿ ಸರ್ಕಾರದಿಂದ ಹೆಚ್ಚಿನ ಹಣವನ್ನು ಪಡೆದುಕೊಂಡು ಆದಾಯ ವಂಚನೆ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಎಲ್ಲ ಅವಿಷ್ಕಾರ ಸಾಧ್ಯ : ಸಿಎಂ ಬೊಮ್ಮಾಯಿ

ಮಲ್ಲೇಶ್ವರಂ 15 ಕ್ರಾಸ್ನ ಆರ್ವಿ ಮೆಟ್ರೊ ಪೊಲೀಸ್ ಲ್ಯಾಬ್ ಮತ್ತು ಡಯಾಗ್ನಸ್ಟಿಕ್ನ ಮುಖ್ಯಸ್ಥ ನಾಗಭೂಷಣ ರಾವ್ ಹಾಗೂ ರವಿ ಸೇರಿದಂತೆ ಮತ್ತಿತರರನ್ನು ಸತತವಾಗಿ ವಿಚಾರಣೆ ನಡೆಸಿ ಕೋವಿಡ್ ಸಂದರ್ಭದಲ್ಲಿ ಎಷ್ಟು ಜನ ದಾಖಲಾಗಿದ್ದರು, ಅವರಿಗೆ ಇಲ್ಲಿ ಎಷ್ಟು ದಿನ ಚಿಕಿತ್ಸೆ ನೀಡಲಾಗಿತ್ತು? ಒಬ್ಬ ರೋಗಿಗೆ ನಿಗದಿಪಡಿಸಿದ ಚಿಕಿತ್ಸಾ ದರ ಇತ್ಯಾದಿವಿಷಯಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

MP ಪ್ರತಾಪ್ ಸಿಂಹ ವಿರುದ್ಧ ಸಿಎಂಗೆ MLA ರಾಮದಾಸ್ ದೂರು

ಇದೇ ರೀತಿ ಹುಬ್ಬಳ್ಳಿಯಲ್ಲೂ ಕೂಡ ಐಟಿ ಅಧಿಕಾರಿಗಳು ಕೆಲವು ಖಾಸಗಿ ಲ್ಯಾಬ್ಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

Articles You Might Like

Share This Article