ಬೆಂಗಳೂರು,ಫೆ.6- ಶ್ರೀರಂಗಪಟ್ಟಣ ಬೈಪಾಸ್ ಕಳೆದ ವಾರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿರುವುದರಿಂದ, ಬಹುನಿರೀಕ್ಷಿತ ಬೆಂಗಳೂರು-ಮೈಸೂರು ರಸ್ತೆ ಹೆದ್ದಾರಿ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಕಾರ ಎಕ್ಸ್ಪ್ರೆಸ್ವೇ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 275ನ್ನು 10-ಲೇನ್ ರಸ್ತೆಗೆ ವಿಸ್ತರಿಸಿದೆ. 117-ಕಿಮೀ ಹೆದ್ದಾರಿ ಬೆಂಗಳೂರಿನ ನೈಸ್ ಪ್ರವೇಶದ್ವಾರದಿಂದ ಮೈಸೂರಿನ ರಿಂಗ್ ರೋಡ್ ಜಂಕ್ಷನ್‍ವರೆಗೆ ಪ್ರಯಾಣದ ಸಮಯವನ್ನು ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿತಗೊಳಿಸಲಿದೆ.
ಮಾರ್ಚ್ ಮೊದಲ ವಾರದಲ್ಲಿ ಮೋದಿ ಅವರಿಂದ ಅಕೃತವಾಗಿ ಉದ್ಘಾಟನೆಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸ್ಟ್ರೆಚ್‍ನ ಬಹುತೇಕ ಭಾಗಗಳು ಈಗಾಗಲೇ ತೆರೆದಿದ್ದು, ಕೆಎಸ್‍ಆರ್‍ಟಿಸಿ ಬಸ್‍ಗಳು ಸೇರಿದಂತೆ ವಾಹನಗಳು ಸಂಚರಿಸುತ್ತಿದ್ದು ಪ್ರಯಾಣಕ್ಕೆ 2 ಗಂಟೆ ಸಮಯ ತೆಗೆದುಕೊಳ್ಳುತ್ತಿವೆ.
ಭಾರತದಲ್ಲಿ ನಡೆಯುವ IMF ದುಂಡು ಮೇಜಿನ ಸಭೆಗೆ ಚೀನಾ ಹಣಕಾಸು ಸಚಿವರು
ಟೋಲ್ ಪ್ರಮಾಣವನ್ನು ಇನ್ನೂ ನಿಗದಿಪಡಿಸಲಾಗಿಲ್ಲ, ಆದರೆ ವಾಹನ ಸವಾರರು ಈಗಾಗಲೇ ರಸ್ತೆಯನ್ನು ಬಳಸುತ್ತಿರುವುದರಿಂದ ಈ ತಿಂಗಳು ಸಂಗ್ರಹಣೆ ಪ್ರಾರಂಭವಾಗುವ ಸಾಧ್ಯತೆಯಿದೆ. ನಾವು ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್‍ಗಳನ್ನು ತೆರೆಯಲು ಕಾಯುತ್ತಿದ್ದೆವು, ಅದನ್ನು ಈಗ ಮಾಡಲಾಗಿದೆ ಎಂದು ಎನ್‍ಎಚ್‍ಎಐ ಮೂಲಗಳು ತಿಳಿಸಿವೆ.
ಅದಾನಿ ಹಗರಣದ ತನಿಖೆಗೆ ಒತ್ತಾಯಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ
ಮಾರ್ಚ್ 2014ರಲ್ಲಿ, ಕೇಂದ್ರ ಮೇಲ್ಮೈ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿತು ಮತ್ತು ಬೆಂಗಳೂರು-ಮೈಸೂರು ಮಾರ್ಗವು ಅವುಗಳಲ್ಲಿ ಒಂದಾಗಿದೆ. 2014ರಲ್ಲಿ ಯೋಜನೆಯ ಅಂದಾಜು ವೆಚ್ಚ 4,100 ಕೋಟಿ ರೂ.ಗಳಾಗಿದ್ದು, ಈಗ ಅದು ದುಪ್ಪಟ್ಟಾಗಿದೆ.
Bangalore, Mysore Express, Highway, inaugurated, March,