ಬೆಂಗಳೂರು,ಜ.5- ರಾಜಧಾನಿ ಬೆಂಗಳೂರು ಮತ್ತು ಮೈಸೂರು ನಡುವೆ ಸಂಪರ್ಕ ಕಲ್ಪಿಸುವ ದಶಪಥ ರಸ್ತೆಯನ್ನು ಆತುರವಾಗಿ ಉದ್ಘಾಟಿಸದೆ ಕಾಮಗಾರಿ ಪೂರ್ಣಗೊಂಡ ಬಳಿಕವೇ ಲೋಕಾರ್ಪಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆ ದ್ದಾರಿ ಸಚಿವ ನೀತಿ ಗಡ್ಕರಿ ಅವರೊಂದಿಗೆ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ, ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.
XBB.1.5 ವೈರಸ್ ಭಯ ಬೇಡ, ಆದರೆ, ಅನಗತ್ಯವಾಗಿ ಮನೆಯಿಂದ ಹೊರಹೋಗಬೇಡಿ
ಬೆಳಗಾವಿಯಲ್ಲಿ ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ ಆರು ಜನ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದರು.
ಈಗಾಗಲೇ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಪ್ರಕರಣದ ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.
bangalore mysore, expressway, CM Bommai,