ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ದೇವೇಗೌಡರ ಹೆಸರಿಡಿ: ಶರವಣ

Social Share

ಬೆಂಗಳೂರು, ಜ.5-ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಿ ಎಂದು ಜೆಡಿಎಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಟಿ. ಎ.ಶರವಣ ಮನವಿ ಮಾಡಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವೀಕ್ಷಣೆ ಮತ್ತು ವೈಮಾನಿಕ ಸಮೀಕ್ಷೆಗೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೇ ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದರೆ, ಈ ಮಹಾರಸ್ತೆಗೆ ಕರ್ನಾಟಕದ ಸಾಕ್ಷಿ ಪ್ರಜ್ಞೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಡಿ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಈ ರಸ್ತೆ ಹಾದು ಹೋಗುವ ಉದ್ದಗಲಕ್ಕೂ ಇರುವ ಮಣ್ಣಿನ ಕಣಕಣದಲ್ಲೂ, ರೈತರ ಬೆವರ ಹನಿಯ ಶ್ರಮದಲ್ಲಿ ದೇವೇಗೌಡರ ಹೆಸರು ಅಭಿಮಾನದಿಂದ ರಾರಾಜಿಸುತ್ತಿದೆ. ದೇವೇಗೌಡರು ಈ ನೆಲದ ಸಾರ್ವಭೌಮ ರಾಜಕಾರಣಿ ಮತ್ತು ಅಜಾತ ಶತ್ರು ಆಗಿದ್ದಾರೆ. ಇದನ್ನು ಮನಗಂಡು ಈ ದಿಗ್ಗಜ ನಾಯಕರ ಹೆಸರಿಗೆ ಗೌರವಿಸುವ ದೃಷ್ಟಿಯಿಂದ ಈ ದಶಪಥ ರಸ್ತೆಗೆ ಗೌಡರ ಹೆಸರಿಡುವುದು ಸೂಕ್ತ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಮತ್ತೊಂದು ಭೀಕರ ಅಪಘಾತ ಬೆಳಕಿಗೆ

ಕನ್ನಡ ನಾಡಿನ ನೆಲ ಜಲಕ್ಕೆ, ಇಲ್ಲಿಯ ಹಕ್ಕುಗಳಿಗೆ, ನಾಡಿನ ಅಸ್ಮಿತೆಗೆ ದೇವೇಗೌಡರ ಕೊಡುಗೆ ಅಭೂತಪೂರ್ವ. ನಾಡಿನ ಜೀವ ನದಿಗಳಾದ ಕಾವೇರಿ ಹೋರಾಟದಿಂದ ಹಿಡಿದು, ಕೃಷ್ಣೆಯವರೆಗೂ ಅವರ ಜನಪರ ಆಂದೋಲನ ಕರ್ನಾಟಕದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿಯಂತಹ ಉನ್ನತ ಹುದ್ದೆಯನ್ನು ಅಲಂಕರಿಸಿದ ಪ್ರಪ್ರಥಮ ಕನ್ನಡಿಗ ಎನ್ನುವ ಹಿರಿಮೆ ದೇವೇಗೌಡರದ್ದು. ಕರ್ನಾಟಕದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಕೊಂಡೊಯ್ದ ಹೆಮ್ಮೆ. ದಶಪಥ ರಸ್ತೆಗೆ ಅವರ ಹೆಸರಿಟ್ಟರೆ ಕೇಂದ್ರಕ್ಕೂ ಹೆಸರು ಬರುತ್ತದೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೆ ಮತದಾರರ ಅಂತಿಮ ಪಟ್ಟಿ ಪ್ರಕಟ

ರಾಜ್ಯದ ಬಿಜೆಪಿ ಸರ್ಕಾರ ಪಕ್ಷ ರಾಜಕಾರಣವನ್ನು ಬದಿಗಿಟ್ಟು, ಬೆಂಗಳೂರು-ಮೈಸೂರು ದಶಪಥ ರಸ್ತೆಗೆ ದೇವೇಗೌಡರ ಹೆಸರು ಇಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಶರವಣ ಅರಿಕೆ ಮಾಡಿದ್ದಾರೆ.

bangalore, mysore, expressway, Deve Gowda, named, t a sharavana,

Articles You Might Like

Share This Article