Sunday, June 23, 2024
Homeರಾಜ್ಯಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

ರಾಮನಗರ,ಅ.14- ಬೆಂಗಳೂರು- ಮೈಸೂರು ಎಕ್ಸ್‍ಪ್ರೆಸ್ ವೇನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ನಗರದ ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.

ಪೀಣ್ಯ 2ನೇ ಹಂತದ ನಿವಾಸಿ ಆಟೋ ಚಾಲಕರಾದ ರಾಜೇಶ್(45), ಇವರ ಪತ್ನಿ ಉಮಾ ಸ್ಥಳದಲ್ಲೇ ಮೃತಪಟ್ಟರೆ, ಸಂಬಂಧಿ ಲಕ್ಕಮ್ಮ(65) ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ಏಳು ಮಂದಿ ಓಮ್ನಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದಾಗ ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ವೇ ಬಳಿ ಲಾರಿಯನ್ನು ಓವರ್‍ಟೇಕ್ ಮಾಡಲು ಹೋಗಿ ಇವರಿದ್ದ ಕಾರು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು.

ಪಂಚರಾಜ್ಯಗಳ ಚುನಾವಣೆಯಲ್ಲಿ 42 ಕೋಟಿ ರೂ. ಪ್ರತಿಧ್ವನಿ

ಸಂಚಾರ ದಟ್ಟಣೆ: ಅಪಘಾತದ ಹಿನ್ನೆಲೆಯಲ್ಲಿ ಎಕ್ಸ್‍ಪ್ರೆಸ್ ವೇ ನಲ್ಲಿ ಕೆಲವು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಇಂದು ಮಹಾಲಯ ಅಮಾವಾಸ್ಯೆಯಾಗಿದ್ದು, ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೈಸೂರಿನತ್ತ ತೆರಳುತ್ತಿದ್ದು, ವಾಹನಗಳು ಕಿಲೊಮೀಟರ್‍ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ನಂತರ ಪೊಲೀಸರು ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

RELATED ARTICLES

Latest News