Wednesday, September 18, 2024
Homeರಾಜ್ಯಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಮಂಡ್ಯ, ಸೆ.25- ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಜೋರಾಗಿದ್ದು, ಇಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆಯಲಾಗಿದೆ. ನೂರಾರು ಮಂದಿ ರೈತರು ಏಕಾಏಕಿ ಸಂಜಯ್ ವೃತ್ತದಲ್ಲಿ ಜಮಾಯಿಸಿ ಹೆದ್ದಾರಿಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು. ನೀರು ಹರಿಸುವುದನ್ನು ನಿಲ್ಲಿಸಿ ದಿಟ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಗೆ ಇಳಿದು ಅರೆಬೆತ್ತಲೆ ಪ್ರತಿಭಟನೆ ನಡೆದರೆ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ಬೆಂಗಳೂರು-ಮೈಸೂರು ರಸ್ತೆ ತಡೆದಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ರೈತರನ್ನು ಸಮಾಧಾನಪಡಿಸಲು ಹರಸಾಹಸಪಟ್ಟರು.

ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ

ರೈತರ ಭಾವನೆ ಕಡೆಗಣಿಸಿ ಕೆಣಕಲಾಗುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮಂಡ್ಯ ರೈತರು ಬೆಂಬಲ ನೀಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿಫಲತೆಯಿಂದ ಈ ಸಂಕಷ್ಟ ಎದುರಾಗಿದೆ ಎಂದು ದೂರಿದ್ದಾರೆ.

RELATED ARTICLES

Latest News