ಬೆಂಗಳೂರಿನ ವಾಹನ ಸವಾರರೇ ಇಲ್ಲಿ ಗಮನಿಸಿ

Social Share

ಬೆಂಗಳೂರು,ನ.19- ನಾಳೆಯಿಂದ ವೈಟ್ ಟಾಪಿಂಗ್ ಕಾಮಗಾರಿ ಆರಂಭಗೊಳ್ಳುವುದರಿಂದ ನಗರದ ಶಾಂತಲಾ ಸರ್ಕಲ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತ ವರೆಗಿನ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ. ನಾಳೆಯಿಂದ ಡಿ.18ರವರೆಗೆ ವಾಹನ ಸವಾರರು ಈ ಮಾರ್ಗದಲ್ಲಿ ಸಂಚರಿಸದೆ ಪರ್ಯಾಯ ಮಾರ್ಗ ಬಳಸುವಂತೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ರೈಲ್ವೆ ನಿಲ್ದಾಣದ ಮುಂಭಾಗದ 580 ಮೀಟರ್ ರಸ್ತೆಯನ್ನು ವೈಟ್ ಟಾಪಿಂಗ್ ರಸ್ತೆಯನ್ನಾಗಿ ಮಾರ್ಪಡಿಸಲಾಗುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಾಳೆ ಬಳ್ಳಾರಿಯಲ್ಲಿ ರಾಜ್ಯಮಟ್ಟದ ಬಿಜೆಪಿ ST ಸಮಾವೇಶ

ಈ ಅವಧಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಆಗುವ ಅನಾನುಕೂಲವನ್ನು ತಪ್ಪಿಸಲು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವ ಮೂಲಕ ವಾಹನ ಸವಾರರು ಸಹಕರಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

bangalore, railway, station, Road, White topping,

Articles You Might Like

Share This Article