ಬೆಂಗಳೂರು,ಡಿ.29- ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ನ್ಯಾಯ ಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ ನೀಡಿ ಆಹಾರಧಾನ್ಯಗಳ ದಾಸ್ತಾನು ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲಿಸಿದರು.
ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಹಾಗೂ ಬಿದಲೂರು ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸ್ಥಳೀಯ ಪಡಿತರ ಚೀಟಿದಾರರೊಂದಿಗೆ ಸಂವಾದ ನಡೆಸಿ ನಿಗದಿತ ಪ್ರಮಾಣದ ಆಹಾರ ಧಾನ್ಯಗಳು ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದರು.
68 ಸಾವಿರ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ
ಧಾನ್ಯಗಳ ಗುಣಮಟ್ಟ ಕಾಯ್ದುಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಇದೇ ವೇಳೆ ಅವರು ಸೂಚನೆ ನೀಡಿದರು.
ಆಹಾರ , ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕಿ ಗಿರಿಜಾದೇವಿ ಮತ್ತಿತರರು ಇದ್ದರು.
bangalore, ration shop, Visit, DC Latha,