ಸೇಫ್‍ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 4 ಸಾವಿರ ಸಿಸಿಟಿವಿ ಅಳವಡಿಕೆ

Social Share

ಬೆಂಗಳೂರು, ಮಾ.11- ಸೇಫ್ ಸಿಟಿ ಯೋಜನೆಯಡಿ ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದಿಲ್ಲಿ ತಿಳಿಸಿದರು.

ಸೇಫ್ ಸಿಟಿ ಪ್ರಾಜೆಕ್ಟ್ ಪರಿಚಯ ಮತ್ತು ವೀಕ್ಷಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೆ ಹಂತದಲ್ಲಿ ಮತ್ತೆ ಮೂರು ಸಾವಿರ ಕ್ಯಾಮೆರಾಗಳನ್ನು ನಗರದಲ್ಲಿ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.

ನಾಳೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ

ಟಿ.ಸುನಿಲ್‍ಕುಮಾರ್ ಅವರು ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಸೇಫ್ ಸಿಟಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಮಹತ್ವಾಕಾಂಕ್ಷೆಯ ಸೇಫ್‍ಸಿಟಿ ಯೋಜನೆ ನಾಲ್ಕು ವರ್ಷಗಳ ಬಳಿಕ ಪೂರ್ಣಗೊಂಡಿದೆ ಎಂದು ಅವರು ಹೇಳಿದರು.

ಕಳೆದ ವಾರ ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಯೋಜನೆಯನ್ನು ಉದ್ಘಾಟನೆ ಮಾಡಿದ್ದು, ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಅವರು ವಿವರಿಸಿದರು.

ಸೌದಿ ಪ್ರಜೆಗಳಿಗೆ ಇ-ವೀಸಾ ಸೌಲಭ್ಯ ಮರು ಜಾರಿ ಮಾಡಿದ ಭಾರತ

ಮಹತ್ವಾಕಾಂಕ್ಷೆ ಯೋಜನೆಯನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ಹಿರಿಯ ಅಧಿಕಾರಿಗಳಿಗೂ ಪೊಲೀಸ್ ಆಯುಕ್ತರು ಇದೇ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು.

Bangalore, Safety City, scheme, CC cameras,

Articles You Might Like

Share This Article