ಬೆಂಗಳೂರಿನಲ್ಲಿ ಎಲ್ಲ ಅವಿಷ್ಕಾರ ಸಾಧ್ಯ : ಸಿಎಂ ಬೊಮ್ಮಾಯಿ

Social Share

ಬೆಂಗಳೂರು,ನ.16- ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ಉದ್ಯಮಿಗಳು ಅವಿಷ್ಕಾರ ಮಾಡುವುದರ ಜೊತೆಗೆ ಹೊಂದಾಣಿಕೆ ಹಾಗೂ ಲಾಭಮಾಡಿಕೊಳ್ಳುವ ಮೂಲಕ ಸರ್ಕಾರ ಕ್ಕೂ ಅದಾಯ ತರುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕರೆಕೊಟ್ಟಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್‍ನ 25ನೇ ಆವೃತ್ತಿಯನ್ನು ವಚ್ರ್ಯುವಲ್ ಮೂಲಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ಟಾರ್ಟ್ ಆಪ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಇದು ಏರ್ ಪೋರ್ಟ್ ಗೆ ಹತ್ತಿರ ಬರಲಿದೆ. ನಮ್ಮ ಪ್ರಧಾನಿ ಬಿಐಎಎಲ್ ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಉದ್ಯಮಿಗಳು ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಲು ಮುಂದೆ ಬರಬೇಕೆಂದು ಮನವಿ ಮಾಡಿದರು.

2024ರ ಅಮೆರಿಕ ಅಧ್ಯಕ್ಷೀಯ ಚುನಾವನೆಯಲ್ಲಿ ಟ್ರಂಪ್ ಸ್ಪರ್ಧೆ

ರಾಜ್ಯದಲ್ಲಿ ಆರು ಹೊಸ ನಗರಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಲಬುರ್ಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹಾಗೂ ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ 40%ರಷ್ಟು ನಗರಿಕಕರಣವಾಗಲಿದೆ. ಹೀಗಾಗಿ ಐಟಿ ಬೀಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಿ ಎಂದು ಕರೆ ನೀಡಿದರು.

ಬೆಂಗಳೂರಿಗೆ ಬಂದವರು ಐಟಿ ಬಿಟಿ ಕಂಪನಿಗಳಿಗೆ ಭೇಟಿ ನಿಡುತ್ತಾರೆ. ಮೊದಲು ಸಂಪತ್ತು ಉಳ್ಳವರ ಕಾಲ ಇತ್ತು. ಈಗ ಜ್ಞಾನ ಇರುವವರ ಕಾಲ. ಬೆಂಗಳೂರಿಗೆ ಪ್ರತಿದಿನ 5000ಕ್ಕೂ ಹೆಚ್ಚು ಇಂಜನೀಯರ್ಸ್ ಬಂದು ಹೋಗುತ್ತಾರೆ ಎಂದ ಅವರು, ಬೆಂಗಳೂರಿನಲ್ಲಿ ಸುಮಾರು 400 ಆರ್ ಆಂಡ್ ಡಿ ಸೆಂಟರ್ ಇವೆ. ಬಿಯಾಂಡ್ ಬೆಂಗಳೂರು ಸಾಕಾರಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನಿಡುತ್ತೇವೆ. ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಎಲ್ಲಕಡೆ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ಕಳೆದ 8 ವರ್ಷದಲ್ಲಿ ದ್ವೇಷಾಧಾರಿತ ಭಾಷಣಗಳ ಪ್ರಮಾಣ ಶೇ.500 ರಷ್ಟು ಹೆಚ್ಚಳ

ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜಿವನ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ದ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ನಾವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆಯಿಂದ ಮುಳುಗುತ್ತಿದೆ. ಹಣಕಾಸು ಮೂಲಗಳು ಪ್ರತಿ ಕ್ಷಣವೂ ಇಳಿಮುಖವಾಗುತ್ತಿದೆ. ನಾವು ಪರಿಹಾರ ಕಂಡುಕೊಳ್ಳದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದರಿಸಬೇಕಾಗುತ್ತದೆ. ನಮ್ಮ ಪೂರ್ವಜರು ವ್ಯವಸ್ಥಿತವಾದ ಜೀವನ ಮಾಡುತ್ತಿದ್ದರು.

ಬಲವಂತದ ಮತಾಂತರ ವಿಚಾರಕ್ಕೆ ದಂಪತಿ ನಡುವೆ ಬಿರುಕು

ಯಾವುದೇ ತಂತ್ರಜ್ಞಾನ ಬಂದರೂ ಈ ಪರಿಸರವನ್ನು ಉಳಿಸುವ ಗಣ ಹೊಂದಿರಬೇಕು. ಇಕೊ ಫ್ರೆಂಡ್ಲಿ ವಾತಾವರಣ ಹೊಂದಬೇಕು ಐಟಿ ಬಿಟಿ, ಆರ್ಟಿಫಿಸಿಯಲ್ ಇಂಟ್ಲಿಜನ್ಸ್ ನಮ್ಮ ಸಂಪನ್ಮೂಲವನ್ನು ರಕ್ಷಣೆ ಮಾಡುವ ಸಾಧ್ಯತೆ ಇದೆ. ಮಾನವ ಕುಲಕ್ಕೆ ಯಾವುದು ಅನುಕೂಲವಾಗುತ್ತದೆ ಎನ್ನುವುದನ್ನು ನೀವೇ ಪರೀಕ್ಷಿಸಿ, ನವೀಕರಣ ಇಂದನ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

Articles You Might Like

Share This Article