ಬೆಂಗಳೂರು,ಜ.16- ಸದಾ ವಾಹನ ದಟ್ಟಣೆಯಿಂದ ಗಿಜಿಗುಡುವ ರಾಜಧಾನಿಯಲ್ಲಿ ರೋಗಿಗಳ ಜೀವ ಉಳಿಸೋ ಅಂಬ್ಯುಲೆನ್ಸ್ಗಳು ಸಮಯಕ್ಕೆ ಸರಿಯಾಗಿ ಆಸ್ಪತ್ರೆ ತೆರಳಲು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿ ನಗರದ ರಸ್ತೆಗಳಲ್ಲಿ ಅಂಬ್ಯುಲೆನ್ಸ್ ಗಳು ಸರಾಗವಾಗಿ ಸಂಚರಿಸಲು ಅನುಕೂಲವಾಗುವಂತಹ ಹೊಸ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.
ಟ್ರಾಫಿಕ್ ಸಿಗ್ನಲ್ಗಳಲ್ಲಿ ಸಿಕ್ಕಿ ಹಾಕಿಕೊಳ್ಳುವ ಅಂಬ್ಯುಲೆನ್ಸ್ಗಳಿಗೆ ಸರಾಗ ಸಂಚಾರ ವ್ಯವಸ್ಥೆ ಕಲ್ಪಿಸಲು ಪೊಲೀಸರು ಪರದಾಡಬೇಕಾಗಿತ್ತು. ಹೀಗಾಗಿ ತುರ್ತು ವಾಹನಗಳಿಗೆ ಟ್ರಾಫಿಕ್ ತಪ್ಪಿಸಲು ವಿಶೇಷ ವ್ಯವಸ್ಥೆ ಮಾಡಲು ಸಂಚಾರಿ ಪೊಲೀಸರು ತೀರ್ಮಾನಿಸಿದ್ದಾರೆ.
ಅಂಬ್ಯುಲೆನ್ಸ್ಗಳ ಸರಾಗ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ನ್ಯಾಯಾಲಯ ನೀಡಿದ ಆದೇಶದ ಮೇರೆಗೆ ಸಂಚಾರಿ ಪೊಲೀಸರು ನಗರದಲ್ಲಿ ಸೆನ್ಸಾರ್ ಮಾದರಿ ಟ್ರಾಫಿಕ್ ಸಿಗ್ನಲ್ ಅಳವಡಿಸಲು ಮುಂದಾಗಿದ್ಧಾರೆ.
ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲೂ ಸರ್ಕಾರದ ಪ್ರತಿನಿಧಿಗಳಿರಬೇಕಂತೆ
ನಗರದಲ್ಲಿ ಹೆಚ್ಚು ಟ್ರಾಫಿಕ್ ಇರುವ 160 ಪ್ರದೇಶಗಳಲ್ಲಿ ಅಡಾಫ್ಟಿವ್ ಟ್ರಾಫಿಕ್ ಸಿಗ್ನಲ್ಗಳನ್ನು ಅಳವಡಿಕೆ ಮಾಡಲಾಗುತ್ತಿದೆ. ಹೊಸ ಮಾದರಿಯ ಸಿಗ್ನಲ್ ಅಳವಡಿಕೆ ಮಾಡುವ ಕಡೆ ಆಂಬ್ಯುಲೆನ್ಸ್ಗಳು ಬಂದರೆ ಆಟೋಮ್ಯಾಟಿಕ್ ಆಗಿ ಟ್ರಾಫಿಕ್ ಕ್ಲಿಯರ್ ಆಗಲಿವೆ ಎಂದು ಬೆಂಗಳೂರು ಸಂಚಾರಿ ವಿಭಾಗದ ಆಯುಕ್ತ ಸಲೀಂ ತಿಳಿಸಿದ್ದಾರೆ.
ಇದಕ್ಕಾಗಿ ಆ್ಯಂಬುಲೆನ್ಸ್ಗಳು ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳುವುದನ್ನು ತಪ್ಪಿಸಲು ಸಂಚಾರ ಪೊಲೀಸರ ವತಿಯಿಂದ ‘ವಿಶೇಷ ತುರ್ತು ಪ್ರತಿಕ್ರಿಯೆ ಮೇಜಿನ ಸೇವೆ’ ಮತ್ತು ಸ್ಥಿರ ದೂರವಾಣಿ ಸಂಖ್ಯೆಯ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ತುಮಕೂರು, ಕೋಲಾರ, ರಾಮನಗರಕ್ಕೂ ಬಿಎಂಟಿಸಿ ಬಸ್ ಸೇವೆ!
ಜೀವ ರಕ್ಷಕ 108 ಆಂಬುಲೆನ್ಸ್ಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವುದು ಎಲ್ಲರ ಆದ್ಯ ಕರ್ತವ್ಯ. ಇದೀಗ ಅಂಬ್ಯುಲೆನ್ಸ್ಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲು ಮುಂದಾಗಿರುವ ಸಂಚಾರಿ ಪೊಲೀಸರ ಪ್ರಯತ್ನಕ್ಕೆ ಸಾರ್ವಜನಿಕರು ಶಹಬ್ಬಾಸ್ಗಿರಿ ನೀಡಿದ್ದಾರೆ.
bangalore, traffic police, ambulances, roads,